ಬೆಳಗಾವಿ: ‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರಗೊಳಿಸಬೇಕು. ಅಕ್ರಮವಾಗಿ ಹಣ, ಮದ್ಯ ಅಥವಾ ಇತರೆ ವಸ್ತುಗಳ ಸಾಗಣೆ ಕಂಡುಬಂದಲ್ಲಿ ಕೂಡಲೇ ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆಯ ಕರ್ತವ್ಯ ನಿಯೋಜಿತ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ವಾಹನಗಳಲ್ಲಿ ಸರಕು ಸಾಗಣೆಕೆಯ ಸೂಕ್ತ ದಾಖಲೆಗಳನ್ನು ಹೊಂದಿರುವ ಕುರಿತು ಮತ್ತು ಹಣಕಾಸಿನ ವಹಿವಾಟಿನ ವಿವರಗಳನ್ನು ಪ್ರಮಾಣೀಕರಿಸುವ ಇತರ ದಾಖಲೆಗಳನ್ನು ಹೊಂದಿರುವ ಅಗತ್ಯ ದಾಖಲೆಗಳನ್ನು ಪರಿಶೀಲಿಸಬೇಕು’ ಎಂದರು.

‘ಚೆಕ್‌ಪೋಸ್ಟ್‌ಗಳಲ್ಲಿ ಅನಧಿಕೃತ ನಗದು ಅಥವಾ ಮದ್ಯ ವಶಪಡಿಸಿಕೊಂಡ ಕುರಿತು ಕೂಡಲೇ ಸಂಬಂಧಿಸಿದ ಹಿರಿಯ ಅಧಿಕಾರಿಗಳಿಗೆ ವರದಿ ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.

‘ಈಗಾಗಲೇ ಎರಡು ಕಡೆ ಅನಧಿಕೃತ ಬ್ಯಾನರ್‌ಗಳು ಬಳಕೆಯಾಗಿರುವುದು ಕಂಡುಬಂದಿದೆ. ಈ ಕುರಿತು ಗಲಾಟೆಯಾಗಿ 3 ಪ್ರಕರಣಗಳು ಸಹ ದಾಖಲಾಗಿವೆ. ಇಂಥವುಗಳ ಕುರಿತು ತೀವ್ರ ನಿಗಾ ವಹಿಸಬೇಕು. ಈ ರೀತಿಯ ಬ್ಯಾನರ್‌ಗಳು ಕಂಡು ಬಂದಲ್ಲಿ ಕೂಡಲೇ ತೆರವುಗೊಳಿಸಿ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಲೋಕೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಹೇಶ್ ಕೋಣಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಿಟರ, ಕ್ರೀಡಾ ಇಲಾಖೆ ಉಪ ನಿರ್ದೇಶಕ ಬಿ. ಶ್ರೀನಿವಾಸ್, ಬೆಳಗಾವಿ ತಹಶೀಲ್ದಾರ್ ಸಿದ್ದರಾಯ ಭೋಸಗಿ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ.ರಾಜೀವ ಕೂಲೇರ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ್ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.