ಸೋಮವಾರ, ಅಕ್ಟೋಬರ್ 26, 2020
23 °C

ಬೆಳಗಾವಿ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (ಆರ್‌ಸಿಯು)ದ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜು ಮತ್ತು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಬೇಕು’ ಎಂದು ಒತ್ತಾಯಿಸಿ ರಾಜ್ಯ ಕಾಲೇಜು ಶಿಕ್ಷಕ ಸಂಘ ಆರ್‌ಸಿಯು ಘಟಕದ ಪದಾಧಿಕಾರಿಗಳು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

‘ಆರ್‌ಸಿಯು ಕ್ಯಾಂಪಸ್, ವಿಜಯಪುರ, ಬಾಗಲಕೋಟೆ, ಜಮಖಂಡಿ ಸ್ನಾತಕೋತ್ತರ ಕೇಂದ್ರಗಳು ಹಾಗೂ ಸಂಗೊಳ್ಳಿ ರಾಯಣ್ಣ ಘಟಕ ಕಾಲೇಜಿನಲ್ಲಿ 80 ಮಂದಿ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದೇವೆ. ಯುಜಿಸಿ ನಿಯಮಾವಳಿ ಪ್ರಕಾರ ನಮಗೆ ಗೌರವಧನ ಹೆಚ್ಚಿಸಬೇಕು. ಕಳೆದ ವರ್ಷದಲ್ಲಿ ಪರೀಕ್ಷೆ ಮೊದಲಾದ ಕಾರ್ಯಗಳನ್ನು ನಿರ್ವಹಿಸಿದ ಬಾಕಿಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು’ ಎಂದು ಕೋರಿದರು.

‘ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಜೂನ್, ಜುಲೈ ಮತ್ತು ಆಗಸ್ಟ್ ಅವಧಿಯನ್ನು ಕೋವಿಡ್ ಸೇವೆ ಎಂದು ಪರಿಗಣಿಸಿ ವೇತನ ನೀಡಲಾಗುವುದು ಎಂದು ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅಧಿವೇಶನದಲ್ಲಿ ತಿಳಿಸಿದ್ದಾರೆ. ಅದಕ್ಕೆ ನಮ್ಮನ್ನೂ ಪರಿಗಣಿಸಬೇಕು. ಹಿಂದಿನ ವರ್ಷ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ಈ ವರ್ಷವೂ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.

ಘಟಕದ ಕಾರ್ಯದರ್ಶಿ ಬಿ.ಎಂ. ಬಡಿಗೇರ, ಡಾ.ಎಸ್.ಬಿ. ರಾಯನಗೌಡರ, ಮಹಾದೇವ ಧರಿಗೌಡರ ಮತ್ತು ಸಚಿನ ಹಿರೇಮಠ ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.