ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಪರೀಕ್ಷೆ ಕಡ್ಡಾಯ: ಕಾಲೇಜಿನತ್ತ ಸುಳಿಯದ ವಿದ್ಯಾರ್ಥಿಗಳು

Last Updated 17 ನವೆಂಬರ್ 2020, 6:20 IST
ಅಕ್ಷರ ಗಾತ್ರ
ADVERTISEMENT
""

ಬೆಳಗಾವಿ: ಎಂಟು ತಿಂಗಳ ಬಳಿಕ ಪದವಿ ಕಾಲೇಜುಗಳು ಪುನರಾರಂಭಗೊಂಡಿದ್ದು, ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೋವಿಡ್ - 19 ಕಾರಣದಿಂದ ಕಾಲೇಜುಗಳಲ್ಲಿ ಸುರಕ್ಷತಾ ಕ್ರಮ ಕೈಗೊಂಡು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಾಗಿದ್ದಾರೆ. ವಿದ್ಯಾರ್ಥಿಗಳಿಗಾಗಿ ಕಾಯುತ್ತಾ ಕುಳಿತಿದ್ದಾರೆ.

ವಿದ್ಯಾರ್ಥಿಗಳು ಕೋವಿಡ್ ಪ್ರಮಾಣಪತ್ರ ತರುವುದು ಕಡ್ಡಾಯಗೊಳಿಸಲಾಗಿದೆ. ಅವರಿಗೆ ಪರೀಕ್ಷೆ ಎಲ್ಲಿ ಮಾಡಿಸಬೇಕು ಎನ್ನುವ ಗೊಂದಲ ಅವರಲ್ಲಿ ಉಂಟಾಗಿದೆ. ಹಬ್ಬದ ಕಾರಣ ಹಾಗೂ ಸಾಲು ಸಾಲು ರಜೆಗಳು ಬಂದಿದ್ದರಿಂದ ಕೋವಿಡ್ ಪರೀಕ್ಷಾ ಪ್ರಮಾಣಪತ್ರ ಪಡೆಯುವುದು ಅವರಿಗೆ ಸಾಧ್ಯವಾಗಿಲ್ಲ. ಗ್ರಾಮೀಣ ಪ್ರದೇಶದ ಬಹಳ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ ಇನ್ನೂ ಸಿಕ್ಕಿಲ್ಲ.

ಇವೂ ಸೇರಿದಂತೆ ಹಲವು ಕಾರಣಗಳಿಂದಾಗಿ ವಿದ್ಯಾರ್ಥಿಗಳು ಕಾಲೇಜುಗಳ ಕಡೆ ಸುಳಿದಿಲ್ಲ. ಬಹುತೇಕರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ಪರಿಣಾಮ, ಕಾಲೇಜುಗಳ ಕ್ಯಾಂಪಸ್ ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿತ್ತು.

ಕೆಲವರು ಬಂದಿದ್ದರಾದರೂ ಅವರ ಬಳಿ ಕೋವಿಡ್ ಪರೀಕ್ಷಾ ವರದಿ ಇರಲಿಲ್ಲ. ಆದ್ದರಿಂದ ಅವರನ್ನು ಮಾರ್ಗಸೂಚಿಗಳ ಪ್ರಕಾರ ವಾಪಸ್ ಕಳುಹಿಸಲಾಯಿತು.

ಬೆಳಗಾವಿಯ ಜ್ಯೋತಿ ಕಾಲೇಜಿನ ನೋಟ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT