ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಕಿ ಕಡಿತ ಮಾಡಿರುವ ನಿರ್ಧಾರಕ್ಕೆ ಬದ್ಧ: ಸಚಿವ ಉಮೇಶ ಕತ್ತಿ

Last Updated 28 ಏಪ್ರಿಲ್ 2021, 10:43 IST
ಅಕ್ಷರ ಗಾತ್ರ

ಬೆಳಗಾವಿ: ‘ಅಕ್ಕಿ ಕಡಿತ ಮಾಡಿರುವ ನಿರ್ಧಾರಕ್ಕೆ ಬದ್ಧವಾಗಿದ್ದೇನೆ. ಜನರಿಗೆ ಪೌಷ್ಟಿಕ ಆಹಾರ ಕೊಡಬೇಕು ಎನ್ನುವುದು ನಮ್ಮ ಉದ್ದೇಶ. ಒಟ್ಟು 5 ಕೆ.ಜಿ. ಪಡಿತರದಲ್ಲಿ ಅಕ್ಕಿಯೊಂದಿಗೆ ಆ ಭಾಗದ ಜನರು ತಿನ್ನುವ ರಾಗಿ ಮತ್ತು ಜೋಳ ಕೊಡಲು ನಿರ್ಧರಿಸಿದ್ದೇವೆ’ ಎಂದುಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವಉಮೇಶಕತ್ತಿ ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿಹೇಳಿದರು.

‘ರಾಜ್ಯದ ದಕ್ಷಿಣದ 12 ಜಿಲ್ಲೆಗಳಲ್ಲಿ ಪಡಿತರ ಚೀಟಿಯ ಪ್ರತಿ ಸದಸ್ಯನಿಗೆ 3 ಕೆ.ಜಿ. ರಾಗಿ ಮತ್ತು 2 ಕೆ.ಜಿ. ಅಕ್ಕಿ ನೀಡಲು ನಿರ್ಧರಿಸಲಾಗಿತ್ತು. ಅದರಂತೆ, ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ರಾಗಿ ಖರೀದಿ ಆಗಿರುವುದರಿಂದ, ರಾಗಿ ವಿತರಣೆಯನ್ನು ಏಪ್ರಿಲ್‌ನಿಂದ ಜಾರಿಗೆ ತರಲಾಗಿದೆ. ರಾಜ್ಯದ ಉತ್ತರದ 12 ಜಿಲ್ಲೆಗಳ ಪ್ರತಿ ಸದಸ್ಯನಿಗೆ 3 ಕೆ.ಜಿ. ಜೋಳ ಹಾಗೂ 2 ಕೆ.ಜಿ. ಅಕ್ಕಿ ನೀಡಲು ಉದ್ದೇಶಿಸಲಾಗಿದೆ. ಆದರೆ, ಜೋಳದ ಕನಿಷ್ಠ ಬೆಂಬಲ ಬೆಲೆಯು ಮಾರುಕಟ್ಟೆ ಬೆಲೆಗಿಂತ ಕಡಿಮೆ ಇದ್ದಿದ್ದರಿಂದ ನಿರ್ದಿಷ್ಟ ಪ್ರಮಾಣದಲ್ಲಿ ಜೋಳ ಖರೀದಿ ಸಾಧ್ಯವಾಗಿಲ್ಲ. ಆದ್ದರಿಂದ 3 ಕೆ.ಜಿ. ಜೋಳ ಬದಲಾಗಿ 3 ಕೆ.ಜಿ. ಗೋಧಿಯನ್ನು 2 ಕೆ.ಜಿ. ಅಕ್ಕಿಯೊಂದಿಗೆ ವಿತರಿಸಲು ಉದ್ದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದ ಜೋಳ ಲಭ್ಯತೆ ಇದ್ದಲ್ಲಿ 3 ಕೆ.ಜಿ. ಜೋಳ ಮತ್ತು 2 ಕೆ.ಜಿ. ಅಕ್ಕಿಯನ್ನು ನೀಡುವ ಕಾರ್ಯಕ್ರಮ ಜಾರಿಗೊಳಿಸಲಾಗುವುದು’ ಎಂದು ತಿಳಿಸಿದರು.

‘ಜೋಳಕ್ಕೆ ನಿಗದಿಪಡಿಸಿರುವ ಕನಿಷ್ಠ ಬೆಂಬಲ ಬೆಲೆಯು (₹ 2,640) ಮಾರುಕಟ್ಟೆ ದರಕ್ಕಿಂತ ಕಡಿಮೆ ಇದ್ದ ಕಾರಣ ಅದನ್ನು ₹ 4,785ಕ್ಕೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರವನ್ನು ಕೋರಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT