ಶುಕ್ರವಾರ, ಜುಲೈ 30, 2021
28 °C

ಸಾಮಾನ್ಯ ಪ್ರವೇಶ ಪರೀಕ್ಷೆ 25ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೈದಾನದಲ್ಲಿ ಫೆ.4ರಿಂದ ಫೆ.15ರವರೆಗೆ ಆಯೋಜಿಸಿದ್ದ ಸೇನಾ ಭರ್ತಿ ಶಿಬಿರದಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಇ)ಯನ್ನು ಜುಲೈ 25ರಂದು ನಗರದ ಕೆಎಲ್‌ಇ ಲಿಂಗರಾಜ ಕಾಲೇಜಿನಲ್ಲಿ ಆಯೋಜಿಸಲಾಗಿದೆ’ ಎಂದು ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ವಿಂಗ್‌ಕಮಾಂಡರ್ ಈಶ್ವರ ಕೊಡಳ್ಳಿ ತಿಳಿಸಿದ್ದಾರೆ.

‘ಬೆಳಗಾವಿ, ಕಲಬುರ್ಗಿ, ಕೊಪ್ಪಳ, ಯಾದಗಿರಿ, ಬೀದರ್‌ ಮತ್ತು ರಾಯಚೂರು ಜಿಲ್ಲೆಗಳಲ್ಲಿನ ಆಯ್ಕೆಯಾದ ಅಭ್ಯರ್ಥಿಗಳು ಹಾಜರಾಗಬೇಕು’ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲಾ ಕ್ರೀಡಾಂಗಣದಲ್ಲಿ ಏ.25ರಂದು ಹಮ್ಮಿಕೊಂಡಿದ್ದ ಪರೀಕ್ಷೆಯನ್ನು ಕೋವಿಡ್–19 ಕಾರಣದಿಂದ ಮುಂದೂಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು