ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಸಂಗ: ಡಿಜಿಟಲ್‌ ಸೇವಾ ಕೇಂದ್ರ ಉದ್ಘಾಟನೆ

Last Updated 31 ಜನವರಿ 2022, 11:53 IST
ಅಕ್ಷರ ಗಾತ್ರ

ತೆಲಸಂಗ (ಬೆಳಗಾವಿ ಜಿಲ್ಲೆ): ‘ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಆಶಯದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನಸಾಮಾನ್ಯರಿಗೆ ಸರ್ಕಾರಿ ಶುಲ್ಕವನ್ನು ಮಾತ್ರ ಪಾವತಿಸಿ ಪಡೆಯಬಹುದಾದಂತಹ ಸೇವೆಯನ್ನು ಗ್ರಾಮೀಣ ಮಟ್ಟದಲ್ಲೂ ಒದಗಿಸಲಾಗುತ್ತಿದೆ’ ಎಂದು ಯೋಜನೆಯ ವಲಯ ಮೇಲ್ವಿಚಾರಕ ಚಂದ್ರಪ್ಪ ಹೇಳಿದರು.

ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ‘ಸೇವಾ ಸಿಂಧು ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್‌’ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಾರ್ವಜನಿಕರಿಗೆ ಅತ್ಯವಶ್ಯವಾದ ಸಕಾಲದಂತಹ ಹತ್ತು ಹಲವಾರು ಸೇವೆಗಳು ಈ ಕೇಂದ್ರದಲ್ಲಿ ಸಿಗುತ್ತವೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸ್ವ ಉದ್ಯೋಗ, ಜ್ಞಾನ ವಿಕಾಸದಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಇದರಿಂದ ಗ್ರಾಮೀಣ ಜನರ ಆರ್ಥಿಕ ಸಬಲತೆ ನಮ್ಮ ಆಶಯವಾಗಿದೆ’ ಎಂದರು.

ಡಾ.ಬಿ.ಎಸ್. ಕಾಮನ್, ಡಾ.ಎಸ್.ಐ. ಇಂಚಗೇರಿ, ಹಣಕಾಸು ಪ್ರಬಂಧಕ ವಿನೋದ, ನೋಡಲ್‌ ಅಧಿಕಾರಿ ಪ್ರಕಾಶ, ಸುನಂದಾ ಸಜ್ಜನ, ಜಯಶ್ರೀ ಗಲಗಲಿ, ಅಶ್ವಿನಿ ಮರಡಿ, ಪಾರವ್ವ, ದಾನಮ್ಮ, ಶಿವಪುತ್ರಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT