ಸೋಮವಾರ, ಜುಲೈ 26, 2021
22 °C

ವಿದ್ಯುತ್ ಮಗ್ಗ ನೇಕಾರರಿಗೆ ಪರಿಹಾರ ಧನ ಜಮಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಸರ್ಕಾರದ ಘೋಷಣೆಯಂತೆ ವಿದ್ಯುತ್ ಮಗ್ಗ ನೇಕಾರರಿಗೆ ತಲಾ ₹ 3ಸಾವಿರ ಪರಿಹಾರ ಧನವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಅವರವರ ಬ್ಯಾಂಕ್‌ ಖಾತೆಗಳಿಗೆ ಜಮಾ ಮಾಡಲಾಗಿದೆ’ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಪ್ರಕಟಣೆ ತಿಳಿಸಿದೆ.

‘ವಿದ್ಯುತ್ ಮಗ್ಗ ಘಟಕಗಳಲ್ಲಿನ ನೇಕಾರರು ಹಾಗೂ ಮಗ್ಗಪೂರ್ವ ಚಟುವಟಿಕೆಗಳ ಕೆಲಸಗಾರರ ಖಾತೆ ಜಮೆಯಾಗಿದೆ. ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಪರಿಹಾರ ಧನ ಪಡೆದ ಫಲಾನುಭವಿಗಳಿಗೆ ಡಿಟಿಬಿ ಮೂಲಕ ಜಮಾ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಿ ಪರಿಹಾರ ಧನ ಜಮಾ ಆಗದೇ ಇರುವ ಫಲಾನುಭವಿಗಳು ಡಿಬಿಟಿ ಮೂಲಕ ಪ್ರಸಕ್ತ ಸಾಲಿನ ಪರಿಹಾರ ಪಡೆಯಲು ತಮ್ಮ ಬ್ಯಾಂಕ್ ಖಾತೆಯನ್ನು ಕಡ್ಡಾಯವಾಗಿ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಸಬೇಕು. ಖಾತೆಯು ಚಾಲನೆಯಲ್ಲಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು’ ಎಂದು ಸೂಚಿಸಿದೆ.

ಹೆಚ್ಚಿನ ಮಾಹಿತಿಗೆ ಕಚೇರಿ ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು