ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ

Last Updated 23 ಸೆಪ್ಟೆಂಬರ್ 2021, 12:39 IST
ಅಕ್ಷರ ಗಾತ್ರ

ಬೆಳಗಾವಿ: ‘ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ದೇಶ-ವಿದೇಶಗಳಲ್ಲಿನ ‍ಪ್ರಚಲಿತ ವಿಷಯಗಳ ಕುರಿತು ರಾಷ್ಟ್ರೀಯ ಭಾಷಣ (ಯುವ ಭಾರತದ ದನಿ) ಸ್ಪರ್ಧೆ ಏರ್ಪಡಿಸಲಾಗಿದೆ' ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸುರಭಿ ಧ್ವಿವೇದಿ ತಿಳಿಸಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರ ದನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ದೇಶದ ಯುವಕರನ್ನು ಎಚ್ಚರಿಸುವ ಉದ್ದೇಶದಿಂದ ಭಾಷಣ ಸ್ಪರ್ಧೆ ನಡೆಸಲಾಗುತ್ತಿದೆ’ ಎಂದರು.

‘18ರಿಂದ 35 ವರ್ಷದೊಳಗಿನವರು ಮಾತ್ರ ಭಾಗವಹಿಸಬಹುದು. ಅವರು ಆನ್‌ಲೈನ್ ಮೂಲಕ https://forms.gle/JykwXusa8n7y9vg7 ಅರ್ಜಿ ಭರ್ತಿ ಮಾಡಿ ಸಲ್ಲಿಸುವುದು ಕಡ್ಡಾಯವಾಗಿದೆ. ಮೊದಲ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆ ನಡೆಸಲಾಗುವುದು. ಅದರಲ್ಲಿ ಐವರು ವಿಜೇತರನ್ನು ಜಿಲ್ಲಾ ವಕ್ತಾರರಾಗಿ ನೇಮಿಸಿ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗುವುದು' ಎಂದು ವಿವರ ನೀಡಿದರು.

‘ರಾಜ್ಯ ಮಟ್ಟದಲ್ಲಿ ಸ್ಪರ್ಧೆ ನಡೆಸಿ 10 ಜನ ವಿಜೇತರನ್ನು ರಾಜ್ಯ ವಕ್ತಾರರಾಗಿ ನೇಮಿಸಲಾಗುವುದು. ನಂತರ ರಾಷ್ಟ್ರ ಮಟ್ಟದಲ್ಲಿ ಸ್ಪರ್ಧೆಯಲ್ಲಿ ಅವಕಾಶ ಕಲ್ಪಿಸಲಾಗುವುದು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮ ದಿನವಾದ ನ.14ರಂದು ರಾಷ್ಟ್ರ ಮಟ್ಟದಲ್ಲಿ ಸ್ಪರ್ಧೆಯನ್ನು ನವದೆಹಲಿಯಲ್ಲಿ ನಡೆಸಲಾಗುವುದು’ ಎಂದರು.

‘ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಐವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಅವರು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿ, ಹೆಸರು ಪ್ರಕಟಿಸಲಿದ್ದಾರೆ' ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಗ್ರಾಮೀಣ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ ಪಾಟೀಲ, ಉಪಾಧ್ಯಕ್ಷ ಮೃಣಾಲ ಹೆಬ್ಬಾಳ್ಕರ್, ಚಿಕ್ಕೋಡಿ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಯಲ್ಲಪ್ಪ ಶಿಂಗೆ, ಉಪಾಧ್ಯಕ್ಷ ಸಿದ್ಧಿಕ ಅಂಕಲಗಿ, ಜಿಲ್ಲಾ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸೈಫ್‌ ಅಲಿ ಸೇಠ್, ಉಪಾಧ್ಯಕ್ಷ ಪವನ ರಾಠೋಡ, ಉಸ್ತುವಾರಿಗಳಾದ ಅಬ್ದುಲ ದೇಸಾಯಿ, ಭರತ ನಾಯ್ಕ, ಸಯದ್ ಕಾಲಿದಹ್ಮದ, ಭರತ ನಾಯ್ಕ ಇದ್ದರು.

ಬಳಿಕ ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮತ್ತು ನಗರ ಯುವ ಕಾಂಗ್ರೆಸ್ ಪದಾಧಿಕಾರಿಗಳ ಕಾರ್ಯಕಾರಿ ಸಭೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT