ಬುಧವಾರ, ಡಿಸೆಂಬರ್ 8, 2021
18 °C

ಪ್ರತಿಭಟನಾನಿರತ ರೈತರನ್ನು ಭಯೋತ್ಪಾದಕರೆಂದು ಆರೋಪಿಸಿದ ಕಂಗನಾ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ದೆಹಲಿಯ ಗಡಿಯಲ್ಲಿ ಪ್ರತಿಭಟನಾನಿರತ ರೈತರನ್ನು ಭಯೋತ್ಪಾದಕರೆಂದು ಆರೋಪಿಸಿರುವ ಬಾಲಿವುಡ್ ನಟಿ ಕಂಗನಾ ರನೌತ್‌ ವಿರುದ್ಧ ಇಲ್ಲಿನ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ’ ಎಂದು ವಕೀಲ ಹರ್ಷವರ್ಧನ ಪಾಟೀಲ ತಿಳಿಸಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರು ರೈತರೇ ಅಲ್ಲ. ಅವರು ಭಯೋತ್ಪಾದಕರು ಎಂದು ಕಂಗನಾ ಟ್ವೀಟ್ ಮಾಡಿದ್ದಾರೆ. ಹೀಗಾಗಿ, ಅವರ ವಿರುದ್ಧ ನಾನು ಫೆ. 6ರಂದು ಕೊಟ್ಟಿರುವ ದೂರು ಆಧರಿಸಿ ಎಫ್‌ಐರ್‌ ದಾಖಲಿಸಬೇಕು’ ಎಂದು ಒತ್ತಾಯಿಸಿದರು.

‘ತನಿಖೆ ನಂತರವೆ ದೂರು ದಾಖಲಿಸಿಕೊಳ್ಳುವುದಾಗಿ ಪೊಲೀಸರು ಹೇಳಿದ್ದಾರೆ. 24 ಗಂಟೆಗಳೊಳಗೆ ದೂರು ದಾಖಲಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ, ಕಂಗನಾ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸುತ್ತೇನೆ. ಅವರ ಟ್ವಿಟರ್ ಖಾತೆಯನ್ನು ರದ್ದುಗೊಳಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು