ಮಂಗಳವಾರ, ಏಪ್ರಿಲ್ 13, 2021
30 °C

ಸಿಡಿ ಪ್ರಕರಣ: ಯುವತಿಯು ಠಾಣೆಯಲ್ಲಿ ದೂರು ನೀಡಲಿ ಎಂದ ಸತೀಶ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ. ವಿಚಾರದಲ್ಲಿ ಸಂತ್ರಸ್ತೆ ಎನ್ನಲಾಗುತ್ತಿರುವ ಯುವತಿಯು ಕೇವಲ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದರೆ ಆಗುವುದಿಲ್ಲ. ಸಂಬಂಧಿಸಿದ ಪೊಲೀಸ್ ಠಾಣೆಗೆ ಬಂದು, ತನಗೆ ಯಾವ ರೀತಿಯಲ್ಲಿ ಅನ್ಯಾಯವಾಗಿದೆ ಎನ್ನುವುದನ್ನು ನಮೂದಿಸಿ ದೂರು ನೀಡಬೇಕು ಎಂದು ಶಾಸಕರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯುವತಿಯು ಕಾನೂನಾತ್ಮಕವಾಗಿ ಮುಂದೆ ಬರಬೇಕು. ಪೊಲೀಸರು ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕು’ ಎಂದರು.

‘ಸಿ.ಡಿ. ವಿಚಾರದಲ್ಲಿ ನನ್ನನ್ನು ಸಿಲುಕಿಸಲು ಯತ್ನಿಸಲಾಗುತ್ತಿದೆ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಯಾರನ್ನು ಯಾರೂ ಸಿಲುಕಿಸಲು ಆಗುವುದಿಲ್ಲ. ಪೊಲೀಸ್ ತನಿಖೆಯಿಂದ ಎಲ್ಲವೂ ಸ್ಪಷ್ಟವಾಗಬೇಕಾಗುತ್ತದೆ. ಈ ವಿಷಯದಲ್ಲಿ ಪೊಲೀಸರ ಜವಾಬ್ದಾರಿ ಜಾಸ್ತಿ ಇದೆ’ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು