‘ಪ್ರತಿವರ್ಷ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ದೇಶದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದರೆ, ಯಲ್ಲಮ್ಮನಗುಡ್ಡಕ್ಕೆ ರಸ್ತೆ ಸಂಪರ್ಕ ಮಾತ್ರ ಲಭ್ಯವಿದೆ. ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ವಾಹನಗಳ ದಟ್ಟಣೆ ಹೆಚ್ಚುತ್ತಿದ್ದು, ಸವದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸುವ ಅಗತ್ಯವಿದೆ. ಹೀಗಾಗಿ ನೂತನ ರೈಲ್ವೆ ಮಾರ್ಗ ನಿರ್ಮಾಣಕ್ಕಾಗಿ ಸರ್ವೆ ಕೈಗೊಳ್ಳುವಂತೆ ಹುಬ್ಬಳ್ಳಿ ನೈರುತ್ಯ ವಲಯ ರೈಲ್ವೆ ಮಹಾಪ್ರಬಂಧಕರಿಗೆ ನಿರ್ದೇಶನ ನೀಡಬೇಕು’ ಎಂದು ಕೋರಿದರು.