ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಚಿವ ಸ್ಥಾನ ಸಿಗುವ ವಿಶ್ವಾಸ: ವಿನಯ ಕುಲಕರ್ಣಿ

Published 18 ಜೂನ್ 2024, 13:05 IST
Last Updated 18 ಜೂನ್ 2024, 13:05 IST
ಅಕ್ಷರ ಗಾತ್ರ

ಬೆಳಗಾವಿ: ‘ನನಗೂ ಸಚಿವನಾಗಬೇಕು ಎಂಬ ಆಸೆ ಇರುತ್ತದೆ. ಉತ್ತರ ಕರ್ನಾಟಕ ಭಾಗದಲ್ಲಿ ನನ್ನದೇ ಆದ ಛಾಪು ಇದೆ. ಸಚಿವ ಸ್ಥಾನ ನೀಡುವಾಗ, ನನಗೆ ಇರುವ ಹಿರಿತನವೂ ಪರಿಗಣನೆಗೆ ಬರುತ್ತದೆ ಎಂಬ ವಿಶ್ವಾಸವಿದೆ’ ಎಂದು ಧಾರವಾಡ ಶಾಸಕ ವಿನಯ ಕುಲಕರ್ಣಿ ಹೇಳಿದರು.

‘ನಾನು ಮತ್ತು ಶಾಸಕ ಲಕ್ಷ್ಮಣ ಸವದಿ ಸಚಿವರಾಗುತ್ತೇವೆ ಎಂಬ ಚರ್ಚೆ ನಡೆದ ಬಗ್ಗೆ ನನಗೆ ಮಾಹಿತಿ ಇಲ್ಲ. ಪಕ್ಷದಲ್ಲಿ ನನ್ನ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ನಾನು ಕೇಳದೆಯೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ, ನಿಗಮ– ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಹೀಗಾಗಿ ಸಚಿವ ಸ್ಥಾನ ಸಿಗಲಿದೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಪಡೆಯಲು ಬಸವಜಯ ಮೃತ್ಯುಂಜಯ ಸ್ವಾಮೀಜಿ 25 ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ನಾವೂ ಅವರಿಗೆ ಬೆಂಬಲ ನೀಡಿ, ರಾಜ್ಯ ಸರ್ಕಾರಕ್ಕೂ ಕೋರಿದ್ದೇವೆ. ಲಿಂಗಾಯತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸುವಂತೆ ಹೋರಾಟ ಆರಂಭಿಸುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT