ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಮಾನ್ಯ ಕಾರ್ಯಕರ್ತರನ್ನೂ ಬೆಳೆಸಿದ ಕಾಂಗ್ರೆಸ್‌’

ಮೃಣಾಲ್‌ ಹೆಬ್ಬಾಳಕರ ಪ್ರಚಾರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿಕೆ
Published 6 ಏಪ್ರಿಲ್ 2024, 5:31 IST
Last Updated 6 ಏಪ್ರಿಲ್ 2024, 5:31 IST
ಅಕ್ಷರ ಗಾತ್ರ

ಅರಬಾವಿ: ‘25 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ರಾಜಕೀಯ ಜೀವನ ಆರಂಭಿಸಿದ ನಾನು, ಇಂದು ಏಳು ಕೋಟಿ ಜನಸಂಖ್ಯೆ ಪ್ರತಿನಧಿಸಲು ಏಕೈಕ ಮಹಿಳಾ ಮಂತ್ರಿಯಾಗಿದ್ದೇನೆ. ಸಾಮಾನ್ಯ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ತೋರುವ ಮಹತ್ವ ಇದು. ಇದನ್ನು ಗಮನಿಸಿ ಸ್ಥಳೀಯ ಅಭ್ಯರ್ಥಿ, ನಿಮ್ಮ ಮನೆ ಮಗ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಿ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಅರಬಾವಿ‌ ವಿಧಾನಸಭಾ ಕ್ಷೇತ್ರದ ಮೆಳವಂಕಿ ಹಾಗೂ ಕೌಜಲಗಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಕಾರ್ಯಕರ್ತರು ಈ ಬಾರಿ ಮೈಮರೆಯದೆ ಕೆಲಸ ಮಾಡಬೇಕು’ ಎಂದು ಕರೆ ನೀಡಿದರು.

‘ತಾಯಿ ಲಕ್ಷ್ಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧಿಸುತ್ತಿದ್ದೇನೆ. ಈ ಬಾರಿ ಕಾಂಗ್ರೆಸ್ ಗೆಲುವಿಗೆ ಎಲ್ಲರೂ ಸಹಕರಿಸಬೇಕು’ ಎಂದು ಅಭ್ಯರ್ಥಿ ಮೃಣಾಲ್‌ ಮನವಿ ಮಾಡಿದರು.

ಸ್ಥಳೀಯ ನಾಯಕರಾದ ಡಾ.ಮಹಾಂತೇಶ ಕಡಾಡಿ, ಲಗಮಣ್ಣ ಕಳಸಣ್ಣವರ, ಲಕಣ್ಣ ಸವಸುದ್ದಿ, ಲಕ್ಕಪ್ಪ ಕಲ್ಲಪ್ಪಗೌಡ, ಭರಮಣ್ಣ ಉಪ್ಪಾರ, ರಮೇಶ್ ಉಟಗಿ, ರಾಮಸಾಬ್ ಬೆಳಕೊಡ್, ಚಂದನ ವಕೀಲರು ಶಶಿಕಾಂತ್ ಕಲ್ಲೋಳಿ, ಶ್ರೀಕಾಂತ್ ಕರಿಯಪ್ಪನವರ ಇದ್ದರು.

ಮೆರವಣಿಗೆ: ಕೌಜಲಗಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅಭ್ಯರ್ಥಿ ಮೃಣಾಲ್‌ ಅವರಿಗೆ ಸ್ಥಳೀಯ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು. ಬಳಿಕ ತೆರೆದ ವಾಹನದಲ್ಲಿ ಸಚಿವರು, ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಮೆರವಣಿಗೆ ಮೂಲಕ ಕಾರ್ಯಕ್ರಮ ನಡೆದ ಸ್ಥಳದವರೆಗೂ ಮೆರವಣಿಗೆ ಮೂಲಕ ಕರೆ ತರಲಾಯಿತು. ಇದೇ ವೇಳೆ ಅನ್ಯ ಪಕ್ಷಗಳ ಹಲವು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.

ನಗರದಲ್ಲಿ ಮೃಣಾಲ್ ಪ್ರಚಾರ

ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಅನಗೋಳ ಹಾಗೂ ವಡಗಾವಿಯ ವಿವಿಧ ಸ್ಥಳಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಗುರುವಾರ ಚುನಾವಣೆಯ ಪ್ರಚಾರ ನಡೆಸಿ ಮತ ಯಾಚಿಸಿದರು. ‘ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಕನಸುಗಳನ್ನು ಹೊತ್ತು ಚುನಾವಣೆಗೆ ನಿಂತಿದ್ದೇನೆ. ನಿಮ್ಮ ಆಶೀರ್ವಾದವಿರಲಿ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ’ ಎಂದು ಮೃಣಾಲ್‌ ಭರವಸೆ ನೀಡಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಯುವರಾಜ ಕದಂ ಸೇರಿದಂತೆ ಹಲವಾರು ಸ್ಥಳೀಯ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಇದ್ದರು. ಬೆಳಗಾವಿ ನೇಕಾರರ ಸಂಘದ ಮುಖಂಡ ಪಿ.ಡಿ.ದೋತ್ರೆಯವರ ಮನೆಗೆ ಮೃಣಾಲ್‌ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT