ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಸಮಿತಿ ರಚನೆ

Last Updated 11 ನವೆಂಬರ್ 2020, 12:28 IST
ಅಕ್ಷರ ಗಾತ್ರ

ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಮಿತಿಯೊಂದನ್ನು ರಚಿಸಿದ್ದಾರೆ.

ಅಧ್ಯಕ್ಷರಾಗಿ ಶಾಸಕ ಎಂ.ಬಿ ಪಾಟೀಲ, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಸಂಯೋಜಕರಾಗಿ ನೇಮಿಸಿದ್ದಾರೆ. ಎಲ್. ಹನುಮಂತಯ್ಯ, ಎಚ್.ಎಂ. ರೇವಣ್ಣ, ವೀರಕುಮಾರ ಎ. ಪಾಟೀಲ, ಅಜಯಕುಮಾರ್ ಸರ್‌ನಾಯಕ್, ಅನಿಲ್ ಲಾಡ್, ಜಿ.ಎಸ್. ಪಾಟೀಲ, ಬಸವರಾಜ ಶಿವಣ್ಣನವರ, ಶ್ರೀನಿವಾಸ ವಿ. ಮಾನೆ, ನಾಗರಾಜ್ ಚೆಬ್ಬಿ ಅವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿದ್ದಾರೆ. ಪಕ್ಷದ ಮುಖಂಡರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ, ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಿ ಆಕಾಂಕ್ಷಿಗಳ ಪಟ್ಟಿ ತಯಾರಿಸಿ ಕೆಪಿಸಿಸಿಗೆ ಕೂಡಲೇ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT