ಶನಿವಾರ, ಸೆಪ್ಟೆಂಬರ್ 25, 2021
25 °C

ಅಂಗವಿಕಲರಿಗೆ ಜಿಲ್ಲಾ ಕಾಂಗ್ರೆಸ್‌ನಿಂದ ದಿನಸಿ ಕಿಟ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಕೋವಿಡ್‌ನಿಂದ ತೊಂದರೆಗೀಡಾದ ಅಂಗವಿಕಲರಿಗೆ ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಸಮಿತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ದಿನಸಿ ಕಿಟ್‌ಗಳನ್ನು ಶುಕ್ರವಾರ ವಿತರಣೆ ಮಾಡಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಚಾಲನೆ ನೀಡಿದ ಅವರು, ‘ಕೋವಿಡ್ ಲಾಕ್‌ಡೌನ್‌ನಿಂದ ಎಲ್ಲ ವರ್ಗದ ಜನರಿಗೂ ಸಮಸ್ಯೆಯಾಗಿದೆ. ಅದೇ ರೀತಿ ಅಂಗವಿಕಲರು ಕೂಡ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್ ವತಿಯಿಂದ ಅವರಿಗೆ ನೆರವು ಕಲ್ಪಿಸಲಾಗಿದೆ’ ಎಂದು ಹೇಳಿದರು.

‘ಆರ್ಥಿಕವಾಗಿ ತೊಂದರೆಗೀಡಾಗಿದ್ದು, ಸಹಾಯ ಒದಗಿಸುವಂತೆ ಜಿಲ್ಲಾ ಅಂಗವಿಕಲರ ಸಂಘದ ಸದಸ್ಯರು ಕೆಲ ದಿನಗಳ ಹಿಂದೆ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಿಸಾನ್ ಕಾಂಗ್ರೆಸ್ ರಾಜ್ಯ ಘಟಕದ ಸಂಚಾಲಕ ರಾಜೇಂದ್ರ ಪಾಟೀಲ ಅವರ ಪ್ರಾಯೋಜಕತ್ವದಲ್ಲಿ ವಿತರಣೆ ಮಾಡಲಾಯಿತು’ ಎಂದರು.

ಪಕ್ಷದ ಗ್ರಾಮೀಣ ಜಿಲ್ಲಾ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಕಿಸಾನ್ ಕಾಂಗ್ರೆಸ್ ರಾಜ್ಯ ಘಟಕದ ಸಂಚಾಲಕ ರಾಜೇಂದ್ರ ಪಾಟೀಲ, ಮುಖಂಡ ವೀರಕುಮಾರ ಪಾಟೀಲ, ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮಣ್ಣವರ, ಗ್ರಾಮೀಣ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ (ಆಡಳಿತ) ಪ್ರದೀಪ ಎಂ.ಜೆ. ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು