ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಗ್ಯಾರಂಟಿ’ ನಿಲ್ಲಿಸುವ ಪ್ರಶ್ನೇಯೇ ಇಲ್ಲ: ರಾಜು ಕಾಗೆ

Published 9 ಜುಲೈ 2024, 15:38 IST
Last Updated 9 ಜುಲೈ 2024, 15:38 IST
ಅಕ್ಷರ ಗಾತ್ರ

ಕಾಗವಾಡ: ‘ರಾಜ್ಯದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದ್ದು’ ಎಂದು ಕಾಗವಾಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಶಾಸಕ ರಾಜು ಕಾಗೆ ಹೇಳಿದರು.

ಕಾಗವಾಡ ಪಟ್ಟಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ನೂತನ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು.

‘ಐದು ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆವರೆಗೆ ಮಾತ್ರ ಸೀಮಿತವಾಗಿರುತ್ತವೆ. ನಂತರ ಅವುಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ವಿರೋಧ ಪಕ್ಷದವರು ಆರೋಪಿಸುತ್ತಿರುವುದು ಶುದ್ಧ ಸುಳ್ಳು. ರಾಜ್ಯದಲ್ಲಿ ಮುಂದಿನ 5 ವರ್ಷ ನಮ್ಮ ಕಾಂಗ್ರೆಸ್ ಸರ್ಕಾರವೇ ಇರಲಿದೆ. ಇದಲ್ಲದೇ ಮುಂದಿನ 20 ವರ್ಷಗಳವರೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಇರಲಿದ್ದು, ಗ್ಯಾರಂಟಿ ಯೋಜನೆಗಳು ಸಹ ಮುಂದಿನ 20 ವರ್ಷಗಳವರೆಗೂ ಇರಲಿವೆ. ನಮ್ಮ ಕ್ಷೇತ್ರದಲ್ಲಿ ಗೃಹಲಕ್ಷ್ಮಿ ಯೋಜನೆಯು ಶೇ. 98.88ರಷ್ಟು ಅನುಷ್ಠಾನಗೊಂಡಿದೆ’ ಎಂದರು.

ಇದೇ ವೇಳೆ ಕಾಗವಾಡ ತಾಲ್ಲೂಕಿನಲ್ಲಿ ಆಯ್ಕೆಗೊಂಡಿರುವ 36 ಅಂಗನವಾಡಿ ಕಾರ್ಯಕರ್ತೆಯರಿಗೆ ಹಕ್ಕು ಪತ್ರಗಳನ್ನು ವಿತರಿಸಿದರು.

ತಹಶೀಲ್ದಾರ್ ರಾಜೇಶ ಬುರ್ಲಿ, ತಾಲ್ಲೂಕು ಪಂಚಾಯಿತಿ ಇಒ ಈರಣ್ಣಾ ವಾಲಿ, ಸಿಡಿಪಿಒ ಸಂಜೀವಕುಮಾರ ಸದಲಗಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಕೆ. ಗಾವಡೆ, ಮುಖಂಡರಾದ ರಮೇಶ ಚೌಗಲಾ, ಜ್ಯೋತಿಕುಮಾರ ಪಾಟೀಲ, ಕಾಕಾ ಪಾಟೀಲ, ಚಿದಾನಂದ ಅವಟಿ, ಸೌರಭ ಪಾಟೀಲ, ಸುಭಾಶ ಪಾಟೀಲ, ಉಮೇಶ ಪಾಟೀಲ, ಭೀಮು ಅಕಿವಾಟೆ, ರಾಜೇಂದ್ರ ಚೌಗುಲಾ, ಪ್ರಕಾಶ ಹೆಮಗೀರೆ, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿಜಯ ಅಕಿವಾಟೆ, ಸತೀಶ ಯರಂಡೋಲಿ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT