ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಗವಾಡ: ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

Published 3 ಏಪ್ರಿಲ್ 2024, 18:10 IST
Last Updated 3 ಏಪ್ರಿಲ್ 2024, 18:10 IST
ಅಕ್ಷರ ಗಾತ್ರ

ಕಾಗವಾಡ (ಬೆಳಗಾವಿ ಜಿಲ್ಲೆ): ಕಾಗವಾಡ ತಾಲ್ಲೂಕಿನ ಖಿಳೇಗಾಂವ ಗ್ರಾಮದ ಕಾಂಗ್ರೆಸ್‌ ಮುಖಂಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಣ್ಣಪ್ಪ ಬಸಪ್ಪ ನಿಂಬಾಳ (58) ಅವರನ್ನು ಬುಧವಾರ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

ಅಣ್ಣಪ್ಪ ಅವರು ಬುಧವಾರ ಸಂಜೆ ದೇವಸ್ಥಾನಕ್ಕೆ ಹೋಗಿ ಮರಳುತ್ತಿದ್ದ ವೇಳೆ ಆರು ಮಂದಿ ಮುಸುಕುಧಾರಿಗಳ ಗುಂಪು ಅವರ ಮೇಲೆ ದಾಳಿ ಮಾಡಿದೆ. ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಣ್ಣಪ್ಪ ಅವರನ್ನು ಅಥಣಿ ಆಸ್ಪತ್ರೆಗೆ ಸಾಗಿಸಲಾಯಿತು. ಮಾರ್ಗ ಮಧ್ಯದಲ್ಲೇ ಅವರು ಉಸಿರು ಬಿಟ್ಟರು ಎಂದು ಮೂಲಗಳು ತಿಳಿಸಿವೆ.

ಅಣ್ಣಪ್ಪ ಅವರು ಶಾಸಕರಾದ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಅವರ ಆಪ್ತರಾಗಿದ್ದರು. ಕೊಲೆ ವಿಷಯ ತಿಳಿದು ಶಾಸಕ ಸವದಿ ಆಸ್ಪತ್ರೆಗೆ ಭೇಟಿ ನೀಡಿದರು.

ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಥಣಿ ಪೊಲೀಸರು ತಿಳಿಸಿದ್ದಾರೆ. ಗ್ರಾಮದಲ್ಲಿ ಆತಂಕದ ವಾತಾವರಣ ಮನೆ ಮಾಡಿದ್ದು, ಪೊಲೀಸ್‌ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT