ಬುಧವಾರ, ಏಪ್ರಿಲ್ 1, 2020
19 °C

ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ‘ಮಹಾತ್ಮ ಗಾಂಧೀಜಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕು’ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆಗ್ರಹಿಸಿದರು.

ಕಾಂಗ್ರೆಸ್‌ ಅಥಣಿ ಮತ್ತು ತೆಲಸಂಗ ಬ್ಲಾಕ್ ವತಿಯಿಂದ ಹಮ್ಮಿಕೊಂಡಿದ್ದ ಮಿನಿವಿಧಾನಸೌಧ ಬಳಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ಸಂಸದ ಹೆಗಡೆ ಅವರ ಕೀಳುಮಟ್ಟದ ಅಭಿರುಚಿಯು ಆ ಸ್ಥಾನದ ಘನತೆ-ಗೌರವ ಕಳೆದಿದೆ. ಉಪವಾಸ ಸತ್ಯಾಗ್ರಹ ಮಾಡಿದವರು ನಾಟಕ ಆಡಿದ್ದಾರೆ ಎಂಬ ಹೇಳಿಕೆ ಖಂಡನಾರ್ಹ. ಈ ಮೂಲಕ ಅವರು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ್ದಾರೆ. ಹೀಗಾಗಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ಅನಿಲ ಸುಣಧೋಳಿ, ರಮೇಶ್ ಸಿಂದಗಿ, ಸತ್ಯಪ್ಪ ಬಾಗೆನ್ನವರ, ಬಸವರಾಜ ಬುಟಾಳಿ, ರಾವಸಾಬ ಐಹೊಳೆ, ಶ್ರೀಕಾಂತ ಪೂಜಾರಿ, ಸೈಯದ್ ಅಮೀನ್ ಗದ್ಯಾಳ, ರಾಜು ಜಮಖಂಡಿಕರ, ಶಿವು ಗುಡ್ಡಾಪುರ, ಬೀರಪ್ಪ ಯಕ್ಕಂಚಿ, ಶಿವು ಸಂಕ, ಬಂದೇನವಾಜ ಮಿರ್ಜಿ, ರಾಹುಲ ಮಾಚಕನೂರ, ರೇಖಾ ಪಾಟೀಲ, ಸುನೀತಾ ಐಹೊಳೆ, ಮಹಾದೇವಿ ಹೋಳಿಕಟ್ಟಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು