ಮಂಗಳವಾರ, ಮೇ 17, 2022
27 °C
ಪೆಟ್ರೋಲ್, ಡೀಸೆಲ್‌ ಬೆಲೆ ಬೆಲೆ ಕಡಿಮೆ ಮಾಡಲು ಆಗ್ರಹ

ಬೆಲೆ ಏರಿಕೆ: ಕಾಂಗ್ರೆಸ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೌಜಲಗಿ: ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬೆಳಗಾವಿ ಜಿಲ್ಲಾ ಕಿಸಾನ್‌ ಕಾಂಗ್ರೆಸ್ ವತಿಯಿಂದ ಸಮೀಪದ ಅವರಾದಿ ಗ್ರಾಮದ ಪೆಟ್ರೋಲ್ ಪಂಪ್‌ ಸಮೀಪ ಪ್ರತಿಭಟನೆ ನಡೆಯಿತು.

ಜಿಲ್ಲಾ ಕಿಸಾನ್ ಕಾಂಗ್ರೆಸ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ಮಾತನಾಡಿ, ಪಂಚರಾಜ್ಯಗಳ ಚುನಾವಣೆಗೋಸ್ಕರ ಬೆಲೆ ಕಡಿಮೆ ಮಾಡಿ ಮತ್ತೆ ಪೆಟ್ರೋಲ್, ಡೀಸೆಲ್‌ ಮತ್ತು ಅಡುಗೆ ಅನಿಲ ಬೆಲೆಯನ್ನು ಪ್ರತಿದಿನ ಏರಿಕೆ ಮಾಡಲಾಗುತ್ತಿದೆ ಎಂದರು.

ಕಾರ್ಯಾಧ್ಯಕ್ಷ ಭೀಮಶಿ ಕಾರದಗಿ ಮಾತನಾಡಿದರು. ಜಿಲ್ಲಾ ಕಿಸಾನ್ ಕಾಂಗ್ರೆಸ್ ಉಪಾಧ್ಯಕ್ಷ ಕುಮಾರ ಕಾತರಕಿ, ಕಾರ್ಯಾಧ್ಯಕ್ಷ ರಮೇಶ ಮೋಕಾಶಿ, ಕೌಜಲಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಗಮಣ್ಣ ಕಳಸಣ್ಣವರ, ಕೌಜಲಗಿ ಬ್ಲಾಕ್ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮಂಜು ಮಸಗುಪ್ಪಿ, ಕೌಜಲಗಿ ಬ್ಲಾಕ್ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಾಂತ ಕರಿಗಾರ, ಕಾಂಗ್ರೆಸ್ ಮುಖಂಡರಾದ ಗುರಪ್ಪಸಾಹುಕಾರ ಊಟಗಿ ಇದ್ದರು.

 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು