ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Last Updated 20 ಆಗಸ್ಟ್ 2020, 13:44 IST
ಅಕ್ಷರ ಗಾತ್ರ

ಬೆಳಗಾವಿ: ಕೋವಿಡ್‌ ಮಾರಕ ರೋಗವನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ರಾಜ್ಯದ ಬಿಜೆಪಿ ಸರ್ಕಾರವು, ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ಎಸಗಿದೆ. ಇದರ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಅವರ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

‘ಕೋವಿಡ್ ನಿರ್ವಹಣೆಯಲ್ಲಿ ವಿಫಲ ಸೇರಿದಂತೆ ರೈತರಿಗೆ ಹಾಗೂ ಕೃಷಿ ಕೂಲಿಕಾರರಿಗೆ ಮಾರಕವಾಗಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ರದ್ದುಪಡಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಜಯಶ್ರೀ ಮಾಳಗಿ, ಬಾಳೇಶ ದಾಸನಟ್ಟಿ, ಆಯೇಶಾ ಸನದಿ, ಮಂಜುನಾಥ ಕಾಂಬಳೆ, ಬೆಳಗಾವಿ ಗ್ರಾಮೀಣ ಹಾಗೂ ನಗರ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT