ಬೆಳಗಾವಿ: ಯುದ್ಧದ ನೆಪವೊಡ್ಡಿ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೇಂದ್ರ ಸರ್ಕಾರ ಹೆಚ್ಚಿಸಿರುವುದನ್ನು ಖಂಡಿಸಿ, ಇಲ್ಲಿನ ಕಾಂಗ್ರೆಸ್ ಭವನದ ಎದುರು ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

‘ಅಡುಗೆ ಅನಿಲ ಸಿಲಿಂಡರ್ ದರ ಇಳಿಸಬೇಕು’ ಎಂದು ಘೋಷಣೆ ಕೂಗಿದ ಕಾರ್ಯಕರ್ತೆಯರು, ತಲೆ ಮೇಲೆ ಖಾಲಿ ಅಡುಗೆ ಅನಿಲ ಸಿಲಿಂಡರ್ ಹೊತ್ತು ಗಮನಸೆಳೆದರು.

‘ದೇಶದಲ್ಲಿ ಜನರು ಮೊದಲೇ ಸಂಕಷ್ಟದಲ್ಲಿ ಇದ್ದಾರೆ. ಹೀಗಿರುವಾಗ ಸಿಲಿಂಡರ್ ದರ ಹೆಚ್ಚಿಸಿರುವ ನಿರ್ಧಾರ ಜನರಿಗೆ ಮತ್ತೊಂದು ಹೊಡೆತ ಕೊಟ್ಟಿದೆ’ ಎಂದು ದೂರಿದರು.

ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ., ಜಯಶ್ರೀ ಮಾಳಗಿ ಇತರರಿದ್ದರು.

‘ಒಳಚರಂಡಿ ಪೈಪ್ಲೈನ್ ದುರಸ್ತಿ ಮಾಡಿ’

ಬೆಳಗಾವಿ: ‘ಹಾನಿಗೆ ಒಳಗಾದ ಭೂಗತ ಒಳಚರಂಡಿ ಪೈಪ್ಲೈನ್ಗಳನ್ನು ದುರಸ್ತಿ ಮಾಡಬೇಕು’ ಎಂದು ಒತ್ತಾಯಿಸಿ ಇಲ್ಲಿನ ವಡಗಾವಿಯ ರೈತ ಗಲ್ಲಿ ನಿವಾಸಿಗಳು ಮಂಗಳವಾರ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಖಾಲಿ ಕೊಡಗಳನ್ನು ಪ್ರದರ್ಶಿಸಿ ಪಾಲಿಕೆ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.

‘ನಮಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸೇರುತ್ತಿದೆ. ಇದರಿಂದಾಗಿ ಆ ನೀರು ಸೇವಿಸಲಾಗುತ್ತಿಲ್ಲ. ಹಾಗಾಗಿ ಹಾಳಾಗಿರುವ ಒಳಚರಂಡಿ ಪೈಪ್ಲೈನ್ ಸರಿಪಡಿಸಿ ನಮಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು’ ಎಂದು ಆಗ್ರಹಿಸಿದರು. ಮುಖಂಡ ರಾಜು ಮರ್ವೆ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.