ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೋಷ್ ಪಾಟೀಲ್ ಕುಟುಂಬಕ್ಕೆ ₹1 ಕೋಟಿ ಪರಿಹಾರಕ್ಕೆ ಕಾಂಗ್ರೆಸ್ ಆಗ್ರಹ

Last Updated 13 ಏಪ್ರಿಲ್ 2022, 13:38 IST
ಅಕ್ಷರ ಗಾತ್ರ

ಬೆಳಗಾವಿ: ‘ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣದಡಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಬೇಕು. ಕುಟುಂಬಕ್ಕೆ ₹ 1 ಕೋಟಿ ಪರಿಹಾರ ಘೋಷಿಸಬೇಕು. ಪತ್ನಿಗೆ ವಿದ್ಯಾರ್ಹತೆಗೆ ತಕ್ಕುದಾದ ಸರ್ಕಾರಿ ನೌಕರಿ ಕೊಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.

ಇಲ್ಲಿ ಸಂತೋಷ್ ಪಾಟೀಲ ಮನೆಗೆ ಭೇಟಿ ನೀಡಿ ಅವರ ಪತ್ನಿ ಜಯಶ್ರೀ ಪಾಟೀಲ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಜಯಶ್ರೀ ಅವರಿಗೆ ಸರ್ಕಾರವುನೌಕರಿ ಕೊಡುವವರೆಗೆ ತಾತ್ಕಾಲಿಕವಾಗಿ ನಾವೇ ನೌಕರಿ ಕೊಡಿಸುತ್ತೇವೆ. ಕೆಪಿಸಿಸಿ ವತಿಯಿಂದ ₹ 11 ಲಕ್ಷ ಪರಿಹಾರ ನೀಡಲಾಗುವುದು’ ಎಂದು ಘೋಷಿಸಲಾಗುವುದು ಎಂದರು.

‘ಅವರು ಮಾಡಿರುವ ಕೆಲಸಕ್ಕೆ ಕೊಡಬೇಕಾದ ಬಿಲ್ ಅನ್ನು ಸರ್ಕಾರ ಕೊಡಬೇಕು’ ಎಂದು ಒತ್ತಾಯಿಸಿದರು.

ಇವುಗಳನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT