ಭಾನುವಾರ, ಏಪ್ರಿಲ್ 18, 2021
33 °C

ಕಾಂಗ್ರೆಸ್ ಬಂಡೆ ಇತಿಹಾಸವಾಗಲಿದೆ: ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ: ‘ಇದೇ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ವೇಳೆಗೆ ಕನಕಪುರ ಬಂಡೆಯನ್ನು ರಾಜಕೀಯವಾಗಿ ಒಡೆದು ಹಾಕುತ್ತೇವೆ. ಕಾಂಗ್ರೆಸ್ ಬಂಡೆ ಎನ್ನುವುದು ಕೂಡ ಕೇವಲ ಇತಿಹಾಸವಾಗಿಯಷ್ಟೇ ಉಳಿಯಲಿದೆ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಗುಡುಗಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಅಂಗವಾಗಿ ಹೊರವಲಯದ ಬಸವೇಶ್ವರ ಸಭಾಭವನದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಸತತ ನಾಲ್ಕು ಬಾರಿಗೆ ಬೆಳಗಾವಿ ಕ್ಷೇತ್ರ ಪ್ರತಿನಿಧಿಸಿದ್ದ ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಅವರ ಪತ್ನಿ ಮಂಗಲಾ ಸ್ಪರ್ಧಿಸಿದ್ದಾರೆ’ ಎಂದರು.

‘ನೈತಕತೆಯಿಂದ ಕೂಡಿದ ರಾಜಕಾರಣ ಮಾಡಬೇಕೇ ಹೊರತು, ಶಾಸಕರ ತೇಜೋವಧೆಗೆ ಕಾಂಗ್ರೆಸ್ ಮುಂದಾಗಿರುವುದು ಆ ಪಕ್ಷದ ಸರ್ವನಾಶಕ್ಕೆ ಮಾರ್ಗವಾಗಲಿದೆ’ ಎಂದು ಹೇಳಿದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಚಿಕ್ಕೋಡಿ ಸಂಸದ ಅಪ್ಪಾಸಾಹೇಬ ಜೊಲ್ಲೆ, ಆಹಾರ ಸಚಿವ ಉಮೇಶ ಕತ್ತಿ, ಪಕ್ಷದ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮಾತನಾಡಿದರು.

ಮುಖಂಡರಾದ ಶಶಿಕಾಂತ ನಾಯಕ, ಎಂ.ಎಲ್. ಮುತ್ತೆಣ್ಣವರ, ಮಹಾಂತೇಶ ತಾಂವಶಿ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಕೆ.ಎಲ್.ಇ. ನಿರ್ದೇಶಕ ಜಯಾನಂದ ಮುನವಳ್ಳಿ, ಪಕ್ಷದ ಜಿಲ್ಲಾ ಘಟಕ ಉಪಾಧ್ಯಕ್ಷ ಸುಭಾಷ ಪಾಟೀಲ, ನಗರ ಘಟಕದ ಅಧ್ಯಕ್ಷ ಭೀಮಶಿ ಭರಮಣ್ಣವರ, ಘಟಪ್ರಭಾದ ಸುರೇಶ ಪಾಟೀಲ ಮತ್ತು ಡಿ.ಎಂ. ದಳವಾಯಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು