ಶುಕ್ರವಾರ, ಮೇ 20, 2022
19 °C

ಯಕ್ಸಂಬಾ ಪಟ್ಟಣ ಪಂಚಾಯ್ತಿ ಅಧಿಕಾರ ಕಾಂಗ್ರೆಸ್ ತೆಕ್ಕೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾ ಪಟ್ಟಣ ಪಂಚಾಯ್ತಿ ಅಧಿಕಾರ ಕಾಂಗ್ರೆಸ್ ತೆಕ್ಕೆಗೆ ಬಂದಿದೆ.

ಒಟ್ಟು 17 ಸ್ಥಾನಗಳಲ್ಲಿ 16 ರಲ್ಲಿ ಕಾಂಗ್ರೆಸ್ ಗೆದ್ದಿದೆ. 1ರಲ್ಲಿ ಮಾತ್ರ ಬಿಜೆಪಿ ಗೆಲುವು ಕಂಡಿದೆ. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು.

ಯಕ್ಸಂಬಾ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಸ್ವಗ್ರಾಮ.‌ ಚಿಕ್ಕೋಡಿ ಕಾಂಗ್ರೆಸ್ ಶಾಸಕ ಗಣೇಶ ಹುಕ್ಕೇರಿ ಮತ್ತು ಮುಖಂಡ ಪ್ರಕಾಶ ಹುಕ್ಕೇರಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಪ.ಪಂ. ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು