ಭಾನುವಾರ, ಸೆಪ್ಟೆಂಬರ್ 15, 2019
26 °C

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Published:
Updated:
Prajavani

ಬೆಳಗಾವಿ: ‘ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್‌ ಅವರ ವಿರುದ್ಧ ಕೇಂದ್ರ ಸರ್ಕಾರವು ಸೇಡಿನ ರಾಜಕಾರಣ ಮಾಡುತ್ತಿದೆ. ಜಾರಿ ನಿರ್ದೇಶನಾಲಯ (ಇಡಿ) ಬಳಸಿಕೊಂಡು ವಿರೋಧ ಪಕ್ಷಗಳ ಮುಖಂಡರಿಗೆ ಕಿರುಕುಳ ಕೊಡುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್‌ ಗ್ರಾಮೀಣ ಘಟಕದ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರ ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

‘ಇಡಿ ಅಧಿಕಾರಿಗಳು ಶಿವಕುಮಾರ್‌ ಅವರನ್ನು ಸತತವಾಗಿ ವಿಚಾರಣೆಗೆ ಒಳ‍ಡಿಸಿದ್ದಾರೆ. ಇದು ರಾಜಕೀಯಪ್ರೇರಿತವಾದ ಕ್ರಮವಾಗಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೈವಾಡವಿದೆ’ ಎಂದು ದೂರಿದರು.

‘ಕೇಂದ್ರವು ಸೇಡಿನ ರಾಜಕಾರಣ ನಿಲ್ಲಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಮುಖಂಡರಾದ ಅಡಿವೇಶ ಇಟಗಿ, ಮೃಣಾಲ್ ಹೆಬ್ಬಾಳಕರ, ಯುವರಾಜ ಕದಂ, ಮಹಾಂತೇಶ ಮತ್ತಿಕೊಪ್ಪ ನೇತೃತ್ವ ವಹಿಸಿದ್ದರು.

Post Comments (+)