ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪ ವಿರುದ್ಧ ಅಥಣಿಯಲ್ಲೂ ಪ್ರತಿಭಟನೆ

Last Updated 21 ಫೆಬ್ರುವರಿ 2022, 14:34 IST
ಅಕ್ಷರ ಗಾತ್ರ

ಅಥಣಿ: ‘ದೆಹಲಿಯ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ’ ಎಂಬ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ಖಂಡಿಸಿ, ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ನೇತೃತ್ವದಲ್ಲಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಕಚೇರಿಗೆ ಮನವಿ ಸಲ್ಲಿಸಿದರು.

‘ಈಶ್ವರಪ್ಪ ಅವರ ಹೇಳಿಕೆಯು ರಾಷ್ಟ್ರಕ್ಕೆ ಮಾಡಿದ ಅವಮಾನವಾಗಿದೆ ಮತ್ತು ದೇಶ ವಿರೋಧಿಯೂ ಆಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ತೆಗೆಯಬೇಕು. ದೇಶದ್ರೋಹದ ‍ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ಸತ್ಯಪ್ಪ ಬಾಗೆನ್ನವರ, ಎಸ್.ಕೆ. ಬುಟಾಳಿ, ರಾಹುಲ್ ಮಾಚಕನವರ, ಅನಿಲ ಸುಣಧೋಳಿ, ವಕೀಲ ಶ್ರೀಕಾಂತ್ ಪೂಜೇರಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT