ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ವೇಷಧಾರಿಗೆ ಸನ್ಮಾನಿಸಿ ಕಾಂಗ್ರೆಸ್ ಪ್ರತಿಭಟನೆ

Last Updated 14 ಜೂನ್ 2021, 16:53 IST
ಅಕ್ಷರ ಗಾತ್ರ

ಗೋಕಾಕ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಏರಿಕೆ ಆಗುತ್ತಿರುವುದನ್ನು ಖಂಡಿಸಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವೇಷಧಾರಿಯನ್ನು ಸತ್ಕರಿಸಿ ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಬಳಿಕ ಮಾತನಾಡಿದ ಸತೀಶ, ‘ತೈಲ ಬೆಲೆ ನಿತ್ಯವೂ ಏರಿಕೆಯಾಗುತ್ತಲೇ ಇದೆ. ಇದರಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆ ಆಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದಿಂದ ವಾಹನ ಮಾಲೀಕರಿಗಷ್ಟೇ ಅಲ್ಲ ವಿವಿಧ ರಂಗಗಳಿಗೆ ದೊಡ್ಡ ಹೊಡೆತ ಬೀಳುತ್ತಿದೆ. ನಮ್ಮೊಂದಿಗೆ ಸಾರ್ವಜನಿಕರೂ ಪಕ್ಷಾತೀತವಾಗಿ ಹೋರಾಟದಲ್ಲಿ ಭಾಗವಹಿಸಿದರೆ ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆ ಹಿಂಪಡೆಯುವ ಸಾಧ್ಯತೆ ಇದೆ’ ಎಂದು ತಿಳಿಸಿದರು.

‘ಪಕ್ಷದಿಂದ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಹೋರಾಟ ನಡೆಸಿ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.

ಪಕ್ಷದ ಮುಖಂಡರಾದ ನಜೀರ ಶೇಖ್, ವಿವೇಕ ಜತ್ತಿ, ಬಸವರಾಜ ಸಾಯನ್ನವರ, ಜಾಕೀರ ನದಾಫ್, ನಗರಸಭೆ ಸದಸ್ಯ ಭಗವಂತ ಹುಳ್ಳಿ, ಶಿವು ಪಾಟೀಲ, ಕಲ್ಲಪ್ಪಗೌಡ ಲಕ್ಕಾರ, ರಾಹುಲ ಬಡೆಸಗೋಳ, ಪಾಂಡು ಮನ್ನಿಕೇರಿ, ವಿನೋದ ದರಗಶೆಟ್ಟಿ, ಕಲ್ಪನಾ ಜೋಶಿ, ಮಂಜುಳಾ ರಾಮಗಾನಟ್ಟಿ, ಯಶೋಧಾ ಬಿರಡಿ, ಬಸವರಾಜ ಹತ್ತರಕಿ, ಬಾಬು ಶೇಖಬಡೆ, ಇಮ್ರಾನ್ ತಪಕೀರೆ, ಶಿವಾನಂದ ಪೂಜಾರಿ, ನಯೀಮ ಜಮಾದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT