ಭಾನುವಾರ, ಏಪ್ರಿಲ್ 18, 2021
28 °C
ಸುವರ್ಣ ವಿಧಾನಸೌಧಕ್ಕೆ ಕಚೇರಿ ಸ್ಥಳಾಂತರಕ್ಕೆ ಆಗ್ರಹಿಸಿ ಧರಣಿ

ಸಿ.ಡಿ. ನಕಲಿಯಾದರೆ ರಮೇಶಗೆ ಸಚಿವ ಸ್ಥಾನ ಕೊಡಿ: ಜೆಡಿಎಸ್ ಮುಖಂಡ ಅಶೋಕ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ರಮೇಶ ಜಾರಕಿಹೊಳಿ ಅವರ ವಿರುದ್ಧದ ಸಿ.ಡಿ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಉನ್ನತ ಮಟ್ಟದ ತನಿಖೆ ನಡೆಸಬೇಕು’ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಹೇಳಿದರು.

‘ಸಿ.ಡಿ. ನಕಲಿ ಎನ್ನುವುದು ಸಾಬೀತಾದರೆ ರಮೇಶ ಅವರನ್ನು ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳಬೇಕು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ನಕಲಿ ಸಿ.ಡಿ. ಆಗಿದ್ದರೆ ಯಾರೂ ಅದಕ್ಕೆ ಬಲಿಪಶು ಆಗುವುದು ಬೇಡ. ರಾಜಕಾರಣವೇ ಬೇರೆ. ಇಂತಹ ವಿಷಯಗಳೇ ಬೇರೆ. ಸಿ.ಡಿ. ಬಿಡುಗಡೆ ಆದಾಗ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನಾವು ಆಗ್ರಹಿಸಿದ್ದೆವು; ಗೋಕಾಕದಲ್ಲಿ ಪ್ರತಿಭಟನೆಯನ್ನೂ ನಡೆಸಿದ್ದೆವು. ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ. ಈಗ ‘ಷಡ್ಯಂತ್ರ ನಡೆದಿದೆ. ಸಿ.ಡಿ.ಯು ನಕಲಿ’ ಎಂದು ರಮೇಶ ಜಾರಕಿಹೊಳಿ‌ ಹಾಗೂ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ‌ ಹೇಳುತ್ತಿದ್ದಾರೆ. ಸರ್ಕಾರ ಮತ್ತು ಪೊಲೀಸ್ ಇಲಾಖೆಯು ಸತ್ಯವನ್ನು ಬಹಿರಂಗಪಡಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಬೇಕು’ ಎಂದು ಕೋರಿದರು.

‘ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎನ್ನುವುದು ಈ ಭಾಗದ ಜನರ ಬೇಡಿಕೆಯಾಗಿದೆ. ಮುಖ್ಯಮಂತ್ರಿಯು ಬಜೆಟ್‌ನಲ್ಲಿ ಇದನ್ನು ಘೋಷಿಸುತ್ತಾರೆ ಎಂದು ನಿರೀಕ್ಷಿಸಿದ್ದೆವು. ಆದರೆ, ಸ್ಪಂದನೆ ದೊರೆತಿಲ್ಲ. ಎಂಟು ದಿನಗೊಳಗೆ ಈ ಬಗ್ಗೆ ಸರ್ಕಾರ ನಿರ್ಣಯ ಕೈಗೊಳ್ಳದಿದ್ದರೆ ತೀವ್ರ ಹೋರಾಟ ಕೈಗೊಳ್ಳುತ್ತೇವೆ. ಮಾರ್ಚ್ 22ರಂದು ಸುವರ್ಣ ವಿಧಾನಸೌಧದ ಎದುರು ಧರಣಿ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

‘ಈ ಭಾಗದ ಜನರ ಆಶೋತ್ತರಗಳನ್ನು ಈಡೇರಿಸಲು ಸರ್ಕಾರ ಮುಂದಾಗಬೇಕು’ ಎಂದು ಆಗ್ರಹಿಸಿದರು.

ರೈತ ಹೋರಾಟಗಾರ ಕಲ್ಯಾಣರಾವ ಮುಚಳಂಬಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು