ಸೋಮವಾರ, ಮಾರ್ಚ್ 8, 2021
22 °C

‘ಗ್ರಾಮ ಪಂಚಾಯಿತಿ ಸದಸ್ಯರನ್ನು 6 ತಿಂಗಳು ಮುಂದುವರಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಗ್ರಾಮ ಪಂಚಾಯಿತಿಗಳ ಸದಸ್ಯರ ಅಧಿಕಾರದ ಅವಧಿ ಪೂರ್ಣಗೊಂಡಿದ್ದು, ಸಾಂಕ್ರಾಮಿಕ ರೋಗ ಕೋವಿಡ್–19 ಹರಡುವ ಭೀತಿ ಇರುವುದರಿಂದಾಗಿ ಚುನಾವಣೆ ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಈಗಿರುವ ಸದಸ್ಯರನ್ನೆ ಮುಂದಿನ ಆರು ತಿಂಗಳವರೆಗೆ ಮುಂದುವರಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಂಕರಗೌಡ ಪಾಟೀಲ ಆಗ್ರಹಿಸಿದರು.

ಗುರುವಾರ ನಡೆದ ತಾಲ್ಲೂಕು ಪಂಚಾಯಿತಿ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ‘1994ಲ್ಲಿ ಒಂದು ವರ್ಷದ ಅವಧಿಗೆ ಪಂಚಾಯಿತಿ ಸದಸ್ಯರನ್ನು ಮುಂದುವರಿಸಲಾಗಿತ್ತು. ಈಗಿನ ಪರಿಸ್ಥಿತಿಯನ್ನು ಕೂಡ ವಿಶೇಷವೆಂದು ಪರಿಗಣಿಸಿ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದರು.

‘ಸದಸ್ಯರ ಅಧಿಕಾರವಧಿ ಮುಗಿದ ಹಿನ್ನೆಲೆಯಲ್ಲಿ ಸಮಿತಿ ರಚಿಸಲು ಮುಂದಾಗಿರುವುದು ಸರಿಯಲ್ಲ’ ಎಂದರು.

ಉಪಾಧ್ಯಕ್ಷ ಮಾರುತಿ ಸನದಿ, ಇಒ ಮಲ್ಲಿಕಾರ್ಜುನ ಕಲಾದಗಿ, ಸದಸ್ಯರು, ಅಧಿಕಾರಿಗಳು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು