ಕಾಗವಾಡ: ‘ಸಹಕಾರ ಚಳವಳಿಗೆ ಸುಮಾರು 120 ವರ್ಷಗಳ ಇತಿಹಾಸವಿದ್ದು, ದೇಶದ ಆರ್ಥಿಕ ಪ್ರಗತಿಗೆ ಸಾಕಷ್ಟು ಕೊಡುಗೆ ನೀಡಿದೆ’ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ತಾಲ್ಲೂಕಿನ ಉಗಾರ ಬುದ್ರುಕ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಕೃಷಿ ಸಹಕಾರ ಸಂಘದ ಶತಮಾನೋತ್ಸವದ ಕಾರ್ಯಕ್ರಮದಲ್ಲಿ ಶತಮಾನೋತ್ಸವ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

‘ದೇಶದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಸಹಕಾರಗಳು ಕಾರ್ಯ ನಿರ್ವಹಿಸುತ್ತಿದ್ದು, ₹80 ಸಾವಿರ ಕೋಟಿ ಠೇವಣಿಯೊಂದಿಗೆ ಸಾವಿರಾರು ಜನರಿಗೆ ಉದ್ಯೋಗಾವಕಾಶ ನೀಡಿವೆ. ಅವಿಭಜಿತ ಅಥಣಿ ತಾಲ್ಲೂಕಿನಲ್ಲಿ 154 ಸಹಕಾರ ಸಂಘಗಳಿದ್ದು, ನೂರಕ್ಕೆ ನೂರರಷ್ಟು ವಸೂಲಾತಿ ಇದೆ ಎಂದು ಹೇಳಲು ಹೆಮ್ಮೆ ಎನಿಸುತ್ತದೆ’ ಎಂದರು.

ಶಾಸಕ ರಾಜು ಕಾಗೆ ಮಾತನಾಡಿ, ‘ಸಹಕಾರ ಸಂಘಗಳು ಮೋಜು ಮಾಡುವವರಿಗೆ ಸಾಲ ನೀಡದೆ, ಗುಡಿ ಕೈಗಾರಿಕೆ ಮಾಡುವವರಿಗೆ ಸಾಲ ನೀಡಿದರೆ ವಸೂಲಾತಿಗೆ ಅನುಕೂಲ ಆಗುತ್ತದೆ’ ಎಂದು ತಿಳಿಸಿದರು.

ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯರು, ಧವಲಕೀರ್ತಿ ಭಟ್ಟಾರಕ ಪಟ್ಟಾಚಾರ್ಯರು, ಭಾನುಕೀರ್ತಿ ಭಟ್ಟಾರಕ ಪಟ್ಟಾಚಾರ್ಯರು, ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯರು, ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯರು, ಯತೀಸ್ವರಾನಂದ ಸ್ವಾಮೀಜಿ, ಅಮರೇಶ್ವರ ಸ್ವಾಮೀಜಿ, ಆನಂದರಾವ್ ಅಪ್ಪಾಸಾಹೇಬ ಜಾಧವ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಮೋಹನ್ ಶಹಾ, ಡಿಸಿಸಿ ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕ ಶಿವಪುತ್ರ ಬಾಗೇವಾಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.