ಮಂಗಳವಾರ, ಏಪ್ರಿಲ್ 7, 2020
19 °C

‘ಮದುವೆ ಸರಳವಾಗಿ ನಡೆಸಲು ನಿರ್ಧಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಹೆಚ್ಚು ಜನರ ಸೇರುವ ಮದುವೆಯಂತಹ ಕಾರ್ಯಕ್ರಮಗಳಿಗೆ ಸರ್ಕಾರ ನಿರ್ಬಂಧ ವಿಧಿಸಿರುವುದರಿಂದಾಗಿ, ತಮ್ಮ ಮಗಳ ವಿವಾಹವನ್ನು ಮಾರ್ಚ್‌ 15ರಂದು ಸರಳವಾಗಿ ನಡೆಸಲು ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ತೀರ್ಮಾನಿಸಿದ್ದಾರೆ.

ಪುತ್ರಿ ಡಾ.ಪೂಜಾ ಮದುವೆಯನ್ನು ಖಾನಾಪುರ ರಸ್ತೆಯ ಶಗುನ್‌ ಗಾರ್ಡನ್‌ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಆರತಕ್ಷತೆ ಕಾರ್ಯಕ್ರಮವನ್ನು ಕ್ಲಬ್‌ ರಸ್ತೆಯ ಸಿಪಿಇಡಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಹಲವು ತಿಂಗಳುಗಳಿಂದ ಸಿದ್ಧತೆ ನಡೆಸಿದ್ದೇವೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕ್ರಮ ವಹಿಸಿದೆ. ಹೀಗಾಗಿ, ನಾವೂ ಸಹಕರಿಸುತ್ತೇವೆ. ಮಂಟಪದ ಹೊರಭಾಗದಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗುವುದು. ಸೋಂಕಿನ ಕುರಿತು ಜಾಗೃತಿಯನ್ನೂ ಮೂಡಿಸಲಾಗುವುದು’ ಎಂದಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಮೊದಲಾದ ಗಣ್ಯರು ಬರುವುದು ರದ್ದಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)