ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕು ಹರಡದಂತೆ ಕ್ರಮ ವಹಿಸಿ

ಅಧಿಕಾರಿಗಳಿಗೆ ಸಂಸದ ಜೊಲ್ಲೆ ಸೂಚನೆ
Last Updated 29 ಮಾರ್ಚ್ 2020, 14:00 IST
ಅಕ್ಷರ ಗಾತ್ರ

ಅಥಣಿ: ‘ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗಿಲ್ಲ. ಹಾಗೆಂದು ಉದಾಸೀನ ಮಾಡಬಾರದು. ನೆರೆಯ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಸೂಚಿಸಿದರು.

ಶನಿವಾರ ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಕೊರೊನಾ ವೈರಸ್ ಹರಡದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಲಾಕ್‌ಡೌನ್ ಘೋಷಿಸಿವೆ. ಅಗತ್ಯ ಸವಲತ್ತು ಮತ್ತು ಹಣಕಾಸಿನ ನೆರವು ನೀಡುತ್ತಿವೆ. ಜನರು ಮನೆಯಿಂದ ಹೊರಬಾರದಂತೆ ತಿಳಿವಳಿಕೆ ನೀಡಿ, ಅಗತ್ಯ ವಸ್ತುಗಳ ಪುರೈಕೆಗೆ ವ್ಯವಸ್ಥೆ ಮಾಡಬೇಕು’ ಎಂದು ನಿರ್ದೇಶನ ನೀಡಿದರು.

‘ಪಡಿತರ ಚೀಟಿದಾರರಿಗೆ ಎರಡು ತಿಂಗಳ ಆಹಾರ ಧಾನ್ಯ ವಿತರಿಸಬೇಕು’ ಎಂದು ಸೂಚಿಸಿದರು.

ಶಾಸಕ ಮಹೇಶ ಕುಮಠಳ್ಳಿ, ‘ಅನವಶ್ಯವಾಗಿ ಓಡಾಡುವವರನ್ನು ಪೋಲಿಸರು ನಿಯಂತ್ರಿಸಬೇಕು. ಹೊರಗಿನಿಂದ ಬಂದವರ ಆರೋಗ್ಯದ ಮೇಲೆ ಆರೋಗ್ಯ ಇಲಾಖೆ ಸಿಬ್ಬಂದಿ ನಿಗಾ ವಹಿಸಬೇಕು’ ಎಂದರು.

‘ಖಾಸಗಿ ಆಸ್ಪತ್ರೆಗಳು ಹಾಗೂ ಔಷಧಿ ಅಂಗಡಿಯವರಿಗೆ ಕಡ್ಡಾಯವಾಗಿ ಆರಂಭಿಸುವಂತೆ ಒತ್ತಾಯ ಮಾಡಬೇಡಿ. ಸಿಬ್ಬಂದಿ, ಸೌಲಭ್ಯಗಳ ಕೊರತೆಯಿಂದ ಕೆಲವರು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ. ತಮ್ಮ ಆಸ್ಪತ್ರೆ ಮೂಲಕವೇ ವೈರಾಣು ಹರಡಬಾರದು ಎಂದು ಮುಚ್ಚಿದ್ದಾರೆ. ಅವರಿಗೆ ಒತ್ತಾಯ ಮಾಡಬೇಡಿ’ ಎಂದು ಸೂಚಿಸಿದರು.

‘ದ್ರಾಕ್ಷಿ, ಮುಸುಕಿನಜೋಳ, ರೇಷ್ಮೆ ಬೆಳೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ನಡೆಸಬೇಕು. ರೈತರ ಉತ್ಪನ್ನಗಳ ಮಾರಾಟಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ನಾಯಿಕ, ಚಿಕ್ಕೋಡಿ ಉಪವಿಭಾಗಾಧಿಕಾರಿ ರವೀಂದ್ರ ಕರಿಲಿಂಗನವರ, ತಹಶೀಲ್ದಾರ್‌ ದುಂಡಪ್ಪ ಕೋಮಾರ, ಇಒ ರವಿಂದ್ರ ಬಂಗಾರೆಪ್ಪನವರ, ಡಿವೈಎಸ್ಪಿ ಎಸ್.ವಿ. ಗಿರೀಶ, ಸಿಪಿಐ ಶಂಕರಗೌಡ ಬಸನಗೌಡರ, ಆರೋಗ್ಯ ಅಧಿಕಾರಿ ಡಾ.ಎಂ. ಕೊಪ್ಪದ, ಡಾ.ಚನ್ನಗೌಡ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಕವಲಾಪೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT