ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ಹೊಸದಾಗಿ ಮೂವರಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಇಲ್ಲಿನ ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ದಿನೇ ದಿನೇ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಒಬ್ಬ ಮಹಿಳೆ ಹಾಗೂ ಇಬ್ಬರು ಪುರುಷರು ರೋಗಿ ಸಂಖ್ಯೆ 301 (ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದವರಿವರು) ಜತೆ ದ್ವಿತೀಯ ಸಂಪರ್ಕಕ್ಕೆ ಬಂದವರಾಗಿದ್ದಾರೆ. ಎಲ್ಲರಿಗೂ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಇನ್ನೂ 1,715 ಮಂದಿಯ ಮಾದರಿಗಳ ಪರೀಕ್ಷಾ ವರದಿ ಬರುವುದು ಬಾಕಿ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.