ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪೂರ್ಣ ಲಾಕ್‌ಡೌನ್ ಹಿನ್ನೆಲೆ: ಬೆಳಗಾವಿ ಜಿಲ್ಲೆ ಸ್ತಬ್ಧ

Last Updated 22 ಮೇ 2021, 2:10 IST
ಅಕ್ಷರ ಗಾತ್ರ

ಬೆಳಗಾವಿ: ಕೊರೊನಾ ಸೋಂಕಿನ ಸರಪಳಿ ತುಂಡರಿಸುವ ಉದ್ದೇಶದಿಂದ ಜಿಲ್ಲಾಡಳಿತದಿಂದ ಘೋಷಿಸಿರುವ ಸಂಪೂರ್ಣ ಲಾಕ್‌ಡೌನ್‌ಗೆನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಶನಿವಾರ ಬೆಳಿಗ್ಗೆ 6ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅದರಂತೆ ಪೊಲೀಸರು ಅನುಷ್ಠಾನಕ್ಕೆ ಕ್ರಮ ಕೈಗೊಂಡಿದ್ದಾರೆ. ಆಸ್ಪತ್ರೆಗಳಿಗೆ, ಮೆಡಿಕಲ್ ಸ್ಟೋರ್ ಗಳಿಗೆ ಹೋಗುವವರಿಗೆ ಮಾತ್ರ ಅವಕಾಶ ಕೊಡಲಾಗಿದೆ. ಹಾಲಿನ ಅಂಗಡಿಗಳು ಮಾತ್ರವೇ ತೆರೆದಿವೆ.

ಜನರು ಹಾಗೂ ವಾಹನ ಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿವೆ. ಅಲ್ಲಲ್ಲಿ ಹಾಗೂ ಹೊರವಲಯದಲ್ಲಿ ವಾಯುವಿಹಾರಕ್ಕೆ ಬಂದಿದ್ದವರನ್ನು ಪೊಲೀಸರು ವಾಪಸ್ ಕಳುಹಿಸಿದರು. ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಎಪಿಎಂಸಿ ಮಾರುಕಟ್ಟೆ ಹಾಗೂ ಅಲ್ಲಲ್ಲಿ ಆರಂಭಿಸಿದ್ದ ತಾತ್ಕಾಲಿಕ ಸಗಟು ತರಕಾರಿ ಮಾರುಕಟ್ಟೆಗಳನ್ನು ಕೂಡ ಬಂದ್ ಮಾಡಿಸಲಾಗಿದೆ.

ಅಂತರ ಜಿಲ್ಲೆ ಹಾಗೂ ಅಂತರ ರಾಜ್ಯಗಳ ನಡುವೆ ಸಂಚರಿಸುವ ಸರಕು ಸಾಗಣೆ ವಾಹನಗಳಿಗೆ ಮಾತ್ರವೇ ಅವಕಾಶ ಕೊಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT