ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಪ್ಯಾಕೇಜ್ ಹೆಸರಿನಲ್ಲಿ ಭ್ರಷ್ಟಾಚಾರ: ಲೆಕ್ಕ ಕೊಡಲು ಡಿಕೆಶಿ ಒತ್ತಾಯ

Last Updated 9 ಏಪ್ರಿಲ್ 2021, 6:11 IST
ಅಕ್ಷರ ಗಾತ್ರ

ಬೆಳಗಾವಿ: ಕೊರೊನಾ ಹೆಸರಿನಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ₹ 16ಸಾವಿರ ಕೋಟಿ ಖರ್ಚಿನ ಬಗ್ಗೆ ಮಾಹಿತಿ ನೀಡಲಿ. ₹ 20 ಲಕ್ಷ ಕೋಟಿ ಪ್ಯಾಕೇಜ್ ನಲ್ಲಿ ಯಾರಿಗೆ ಎಷ್ಟು ಸಿಕ್ಕಿದೆ ಎನ್ನುವುದನ್ನು ರಾಜ್ಯ ಸರ್ಕಾರ ತಿಳಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದರು.

ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರನ್ನು ಕರೆದು ಸಭೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈಗ ಸರ್ವ ಪಕ್ಷ ಸಭೆ ಕರೆಯುವ ಅಗತ್ಯವೇನಿದೆ? ಕೊರೊನಾ ಸಂದರ್ಭದಲ್ಲಿ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಮಾಡಬಾರದ್ದು ಮಾಡಿ ದೇಶಕ್ಕೆ, ರಾಜ್ಯಕ್ಕೆ ಅನ್ಯಾಯ ಎಸಗಿದ್ದಾರೆ. ಈಗ ಸಭೆ ಕರೆಯುತ್ತೇವೆ ಎನ್ನುತ್ತಿದ್ದಾರೆ. ಮನಸ್ಸಿಗೆ ಬಂದಂತೆ ಸರ್ಕಾರ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕೊರೊನಾ ಕಾಣಿಸಿಕೊಂಡಾಗ ದೀಪ ಬೆಳಗಿ, ಜಾಗಟೆ ಬಾರಿಸಿರಿ ಎಂದರು. ಅವೆಲ್ಲವನ್ನೂ ಜನರು ನಿಷ್ಠೆಯಿಂದ ಮಾಡಿದ್ದಾಯಿತು. ಈಗ 2ನೇ ಅಲೆ ಬಂದಿದೆ. ಕೋವಿಡ್ ನಿಯಂತ್ರಣದಲ್ಲಿ ಸರ್ಕಾರಗಳು ವಿಫಲವಾಗಿವೆ. ಈಗ ಕರ್ಫ್ಯೂ ಜಾರಿ ಮಾಡುತ್ತಿದ್ದಾರೆ. ನೈಟ್ ಕರ್ಫ್ಯೂ ಜಾರಿಯಿಂದ ಏನೂ ಪ್ರಯೋಜನ ಆಗುವುದಿಲ್ಲ. ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಮಾಡುತ್ತಿರುವುದಾದರೂ ಏಕೆ? ಇಷ್ಟ ಬಂದಂತೆ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT