ಉಗರಗೋಳ: ‘ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನವನ್ನು ಸೆ.30ರವರೆಗೆ ನಿಷೇಧಿಸಲಾಗಿದೆ. ಕೊರೊನಾ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಭಕ್ತರು ಸಹಕಾರ ನೀಡಬೇಕು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.

ಕೊರೊನಾ ನಿಯಂತ್ರಣಕ್ಕೆ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು.

‘ದೇಶದ ನಾನಾ ರಾಜ್ಯಗಳಿಂದ ಭಕ್ತರು ಇಲ್ಲಿಗೆ ಬರುತ್ತಾರೆ. ಈ ಕಾರಣದಿಂದ ಕೋವಿಡ್ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಜನರ ಹಿತದೃಷ್ಟಿಯಿಂದ ಅವಕಾಶ ಕೊಡುತ್ತಿಲ್ಲ’ ಎಂದು ತಿಳಿಸಿದರು.

‘ಮುಂದಿನ ದಿನಗಳಲ್ಲಿ ದೇವಸ್ಥಾನಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು. ಭಕ್ತರಿಗೋಸ್ಕರ 265 ಕೊಠಡಿಗಳ ನಿರ್ಮಾಣ ಕಾಮಗಾಗಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ’ ಎಂದರು.

ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ, ‘ಯಲ್ಲಮ್ಮನಿಗೆ ಎಂದಿನಂತೆ ಅಭಿಷೇಕ, ವಿಶೇಷ ಪೂಜೆ ನೆರವೇರುತ್ತಿದೆ. ಲಾಕ್ಡೌನ್ ಪ್ರಾರಂಭ ಆದಾಗಿನಿಂದ ಈವರೆಗೆ ದೇವಸ್ಥಾನಕ್ಕೆ ₹ 8 ಕೋಟಿ ನಷ್ಟವಾಗಿದೆ’ ಎಂದು ತಿಳಿಸಿದರು.

ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಜಿರಗ್ಯಾಳ, ವೆಂಕಟ ಸೂನ್ನದ, ಸವದತ್ತಿ ಎಎಸ್ಐ ಎಸ್.ಆರ್. ಗಿರಿಯಾಲ, ರಾಮಾಚಾರಿ ಲಮಾಣಿ, ಸದಾನಂದ ಈಟಿ, ಈರಣ್ಣ ಕುಲಕರ್ಣಿ, ಪಂಡಿತ ರಾಜಶೇಖರಯ್ಯ, ಮಂಜನಗೌಡ ಸಂದಿಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.