ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರವೇ ಬಿಜೆಪಿಯ ಸಾಧನೆ: ಶಾಸಕ ಎಂ.ಬಿ. ಪಾಟೀಲ ಆರೋಪ

ಶಾಸಕ ಎಂ.ಬಿ. ಪಾಟೀಲ ಆರೋಪ
Last Updated 5 ಏಪ್ರಿಲ್ 2021, 12:11 IST
ಅಕ್ಷರ ಗಾತ್ರ

ಬೆಳಗಾವಿ: ‘ಬಿಜೆಪಿ ನೂರಾರು ಸುಳ್ಳು ಭರವಸೆಗಳನ್ನು ಜನರಿಗೆ ನೀಡಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಆದರೆ, ಭ್ರಷ್ಟಾಚಾರ ಹೊರತುಪಡಿಸಿ ಬೇರಾವ ಸಾಧನೆಯನ್ನೂ ಮಾಡಿಲ್ಲ’ ಎಂದು ಶಾಸಕ ಎಂ.ಬಿ. ಪಾಟೀಲ ದೂರಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಅಂಗವಾಗಿ ತಾಲ್ಲೂಕಿನ ಮುತ್ನಾಳ ಗ್ರಾಮದಲ್ಲಿ ಸೋಮವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ವಿದೇಶದಿಂದ ಕಪ್ಪು ಹಣ ವಾಪಸ್ ತರುವುದಾಗಿ ಹೇಳಲಾಗಿತ್ತು. ಪ್ರತಿಯೊಬ್ಬರ ಖಾತೆಗೆ ₹ 15 ಲಕ್ಷ ಹಾಕುವುದಾಗಿ ಭರವಸೆ ನೀಡಲಾಗಿತ್ತು. 7 ವರ್ಷದಲ್ಲಿ ₹14 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ತಿಳಿಸಲಾಗಿತ್ತು. ಆದರೆ, ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡರು. ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿದ್ದರು. ಅದರೆ, ರೈತರು ಹಲವು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸೌಜನ್ಯಕ್ಕೂ ಅವರನ್ನು ಭೇಟಿಯಾಗಿಲ್ಲ. ಅವರ ಸಂಕಷ್ಟ ಆಲಿಸಿಲ್ಲ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ದರ ಗಗನಕ್ಕೇರಿದೆ. ಮೋದಿ ಹೇಳಿದ ಒಳ್ಳೆಯ ದಿನಗಳು ಎಲ್ಲಿ ಬಂದಿವೆ?’ ಎಂದು ಕೇಳಿದರು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ‘ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಪಕ್ಷವನ್ನು ಗೆಲ್ಲಿಸಿಕೊಳ್ಳಲು ನಾವೆಲ್ಲರೂ ಶ್ರಮಿಸಬೇಕಾಗಿದೆ’ ಎಂದರು.

ಮುಖಂಡ ಪ್ರಕಾಶ ಹುಕ್ಕೇರಿ ಪ್ರಚಾರದಲ್ಲಿ ಭಾಗವಹಿಸಿದ್ದರು.

***

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ಸಿ.ಸಿ. ಪಾಟೀಲ, ಚನ್ನರಾಜ ಹಟ್ಟಿಹೊಳಿ, ನಾಗರಾಜ ಯಾದವ್ ಇದ್ದರು.

-ಶಾಲಾಭಿವೃದ್ಧಿ ಸಮಿತಿ ಮುಖಂಡರ ಸಭೆ

***

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕನ್ನಡ, ಮರಾಠಿ ಹಾಗೂ ಉರ್ದು ಶಾಲೆಗಳ ಶಾಲಾಭಿವೃದ್ಧಿ ಸಮಿತಿ ಮುಖಂಡರ ಸಭೆಯನ್ನು ನಡೆಸಿದ ಲಕ್ಷ್ಮಿ, ಪಕ್ಷ ಬೆಂಬಲಿಸುವಂತೆ ಕೋರಿದರು.

-ಮುಖಂಡರಾದ ಮೃಣಾಲ ಹೆಬ್ಬಾಳಕರ, ಯುವರಾಜ ಕದಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT