ಗುರುವಾರ , ಮಾರ್ಚ್ 4, 2021
30 °C

ಬೆಳಗಾವಿ: 11 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೋವಿಡ್- 19 ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದರು.

’ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು; ರಾಯಬಾಗ ತಾಲ್ಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ ಒಬ್ಬರು ಬಿಡುಗಡೆಯಾಗಿದ್ದಾರೆ’ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದರು.

ಬಿಡುಗಡೆ ಹೊಂದಿದವರ ವಿವರ

ಬೆಳಗಾವಿಯ ಕ್ಯಾಂಪ್ ಪ್ರದೇಶದ ಪಿ-355, ಪಿ-356, ಪಿ-358 ಹಾಗೂ ಪಿ-359. ಕುಡಚಿ- ಪಿ-296, ಪಿ-297, ಪಿ-299, ಪಿ-301, ಸಂಕೇಶ್ವರ- ಪಿ-293, ಯಳ್ಳೂರ ಪಿ-295 ಹಾಗೂ ಹಿರೇಬಾಗೇವಾಡಿ ಪಿ-193 ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 73 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 26 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಇನ್ನೂ 915 ಮಾದರಿಗಳ ವರದಿ ಬರಬೇಕಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು