ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಮುಂಬೈನಿಂದ ಬಂದ ಗರ್ಭಿಣಿಗೆ ಕೋವಿಡ್–19

ಚೆಕ್‌ಪೋಸ್ಟ್‌ ದಾಟಿ ಬಂದಿದ್ದು ಹೇಗೆ!?
Last Updated 14 ಮೇ 2020, 14:27 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಸದಾಶಿವನಗರ ಬಡಾವಣೆಯ ಗರ್ಭಿಣಿಗೆ ಕೋವಿಡ್–19 ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 108ಕ್ಕೆ ಏರಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರೋಗಿ ಸಂಖ್ಯೆ 974 ಆಗಿರುವ 27ವರ್ಷ ವಯಸ್ಸಿನ ಅವರು ಮಹಾರಾಷ್ಟ್ರ ಮುಂಬೈಗೆ ಪ್ರಯಾಣ ಮಾಡಿ ಬಂದಿದ್ದಾರೆ. ಅವರನ್ನು ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಮೂರು ದಿನಗಳಿಂದ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿರಲಿಲ್ಲ.

ಅಕ್ರಮವಾಗಿ ಪ್ರವೇಶ!

ಗರ್ಭಿಣಿ ಕುಟುಂಬದವರು ಮುಂಬೈನಿಂದ ಅಕ್ರಮವಾಗಿ ನಗರಕ್ಕೆ ಬಂದಿದ್ದಾರೆ. ಸರ್ಕಾರದಿಂದ ಅಧಿಕೃತ ಪಾಸ್ ಪಡೆದಿರಲಿಲ್ಲ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿಲ್ಲ. ಈ ಮೂಲಕ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ, ಕುಟುಂಬದವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕ್ವಾರಂಟೈನ್‌ನಲ್ಲಿ ಇರಬೇಕಾದ ಅವರು ಪ್ರಕರಣವನ್ನೂ ಎದುರಿಸಬೇಕಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಹದ್ದಿನ ಕಣ್ಣಿಟ್ಟಿದ್ದರೂ ಅವರು ಗಡಿ ದಾಟಿ ಬಂದಿದ್ದು ಹೇಗೆ ಎನ್ನುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಸೋಂಕಿತ ಮಹಿಳೆಯ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ 10 ಮಂದಿಯನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ದ್ವಿತೀಯ ಸಂಪರ್ಕಕ್ಕೆ ಬಂದಿದ್ದವರ ಹುಡುಕಾಟ ನಡೆದಿದೆ. ಅಪಾರ್ಟ್‌ಮೆಂಟ್‌ ಒಂದರಲ್ಲಿದ್ದ ಗರ್ಭಿಣಿ ಕುಟುಂಬದವರು ಬಡಾವಣೆಯಲ್ಲೆಲ್ಲಸಂಚರಿಸಿದ್ದರು ಎನ್ನಲಾಗಿದೆ. ಹೀಗಾಗಿ, ಅಲ್ಲಿನ ಸುತ್ತಮುತ್ತಲಿನ ನಿವಾಸಿಗಳಲ್ಲಿ ಕೊರೊನಾ ಸೋಂಕಿನ ಭೀತಿ ಆವರಿಸಿದೆ. ಅಕ್ರಮವಾಗಿ ನುಸುಳುವವರನ್ನು ತಡೆಯುವುದು ಹಾಗೂ ಪತ್ತೆ ಹಚ್ಚುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

ಮುಂಜಾಗ್ರತಾ ಕ್ರಮವಾಗಿ ಬಡಾವಣೆಯಲ್ಲಿ ಸೋಂಕು ನಿವಾರಕ ಸಿಂಪಡಿಸುವ ಕಾರ್ಯ ಗುರುವಾರ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT