ಸೋಮವಾರ, ಜೂನ್ 14, 2021
26 °C

ಆಮ್ಲಜನಕ ಹಂಚಿಕೆ ಪ್ರಮಾಣ ಹೆಚ್ಚಿಸಲು ಕ್ರಮ: ಅಭಯ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಜಿಲ್ಲೆಗೆ ವೈದ್ಯಕೀಯ ಆಮ್ಲಜನಕ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಅದರ ಉಸ್ತುವಾರಿ ವಹಿಸಿರುವ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರೊಂದಿಗೆ ಚರ್ಚಿಸಲಾಗುವುದು’ ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ತಿಳಿಸಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಗೆ ತಾರತಮ್ಯವಾದರೆ, ನಮ್ಮ ಜನರ ಪರವಾಗಿ ಧ್ವನಿ ಎತ್ತುವುದರಲ್ಲಿ ಮೊದಲಿರುತ್ತೇನೆ. ಜನಸಂಖ್ಯೆಗಿಂತಲೂ ರೋಗಿಗಳ ಸಂಖ್ಯೆ ಹಾಗೂ ಸಮಸ್ಯೆಯನ್ನು ಆಧರಿಸಿ ಆಮ್ಲಜನಕ ಪ್ರಮಾಣ ಹಂಚಿಕೆ ಮಾಡಬೇಕು. ಅನ್ಯಾಯ ಆಗಿದ್ದರೆ ಸರಿಪಡಿಸಬೇಕಾಗುತ್ತದೆ. ಜಿಲ್ಲೆಯ ಹಿತದೃಷ್ಟಿಯಿಂದ ಹಲವು ವಿಷಯಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದೇನೆ’ ಎಂದರು.

‘ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ಪ್ರಮಾಣವನ್ನು ಕಡಿಮೆ ಮಾಡುವುದು ಸರಿಯಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು