ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡವರಿಗೆ ನೆರವಾಗಲು ಆಗ್ರಹ

Last Updated 22 ಜೂನ್ 2021, 11:55 IST
ಅಕ್ಷರ ಗಾತ್ರ

ಬೆಳಗಾವಿ: ‘ಲಾಕ್‌ಡೌನ್‌ನಿಂದ ಕಂಗಾಲಾಗಿರುವವರಿಗೆ ನೆರವಾಗಬೇಕು’ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ ನೇತೃತ್ವದಲ್ಲಿ ಮುಖಂಡರು ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

‘ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಎಲ್ಲ ಕುಟುಂಬಗಳಿಗೂ ಕೂಡಲೇ ಸಮಗ್ರ ದಿನಸಿಯಳ್ಳ ಕಿಟ್‌ಗಳನ್ನು ವಿತರಿಸಬೇಕು. ಅತಂತ್ರವಾಗಿರುವ ಕುಟುಂಬಗಳಿಗೆ ಬದುಕು ಕಟ್ಟಿಕೊಳ್ಳಲು ₹ 5 ಲಕ್ಷ ನೆರವು ಕೊಡಬೇಕು. ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಿಸುವಾಗ ವಿಶೇಷ ಸಹಾಯಧನ ನೀಡಬೇಕು’ ಎಂದು ಒತ್ತಾಯಿಸಿದರು.

‘ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು. ಕೋವಿಡ್ ಚಿಕಿತ್ಸೆಯನ್ನು ಸಂಪೂರ್ಣ ಉಚಿತವಾಗಿ ಕಲ್ಪಿಸಬೇಕು. ಕೋವಿಡ್ ಲಸಿಕೆ ನೀಡುವ ಅಭಿಯಾನವನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ವಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT