ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಲ್ಲಿ ಶುಕ್ರವಾರ ನಡೆಸಿದ ಕೋವಿಡ್–19 ನಿರ್ವಹಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಕೆಎಂಎಫ್ ಅಧ್ಯಕ್ಷರೂ ಆಗಿರುವ ಮೂಡಲಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೈರು ಹಾಜರಿ ಎದ್ದುಕಂಡಿತು.

ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಕ್ಷೇತ್ರದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಬೇಡಿಕೆಗಳನ್ನು ಮಂಡಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಕೂಡ ಪಾಲ್ಗೊಂಡಿದ್ದರು. ಆದರೆ, ಬಿಜೆಪಿಯವರೇ ಆದ ರಮೇಶ ಮತ್ತು ಬಾಲಚಂದ್ರ ಸಭೆಯತ್ತ ಸುಳಿಯಲಿಲ್ಲ. ಇದು ಹಲವು ವಿಶ್ಲೇಷಣೆಗಳಿಗೆ ದಾರಿ ಮಾಡಿಕೊಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.