ಭಾನುವಾರ, ಮೇ 16, 2021
26 °C

ಬೆಳಗಾವಿಯಲ್ಲಿ ಕೋವಿಡ್ ಲಸಿಕೆ ಖಾಲಿ: ಡೋಸ್‌ ಸಿಗದೆ ಜನರು ವಾಪಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಈ ನಡುವೆ,
ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ನಿರೋಧಕ ಲಸಿಕೆ ಖಾಲಿಯಾಗಿದೆ. ಹೀಗಾಗಿ ಲಸಿಕೆ ಹಾಕಿಸಿಕೊಳ್ಳಲು ಬಂದ ಹಲವರು ಬರಿಗೈಲಿ ವಾಪಸಾದರು.

ಈ ಕುರಿತು ಪ್ರಜಾವಾಣಿಗೆ ಮಾಹಿತಿ ನೀಡಿದ ಹಲವರು, ಲಸಿಕೆ ಡೋಸ್ ಗಳು ಖಾಲಿಯಾಗಿವೆ. ಯಾವಾಗ ಬರುತ್ತದೆ ಎನ್ನುವುದು ಗೊತ್ತಿಲ್ಲ ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿ ಹೇಳಿದರು ಎಂದು ತಿಳಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಲಸಿಕಾ ಅಧಿಕಾರಿ ಈಶ್ವರ ಗಡಾದ, 'ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಖಾಲಿಯಾಗಿರುವುದು ಗಮನಕ್ಕೆ ಬಂದಿದೆ. ಬೇರೆ ಕಡೆಗಳಲ್ಲಿ ತೊಂದರೆ ಇಲ್ಲ. ಹೆಚ್ಚಿನವರು ಜಿಲ್ಲಾಸ್ಪತ್ರೆಗೆ ಬರುವುದರಿಂದ ಅಲ್ಲಿ ಬೇಡಿಕೆ ಹೆಚ್ಚಿದೆ. ಬೆಂಗಳೂರಿನಿಂದ 30 ಸಾವಿರ ಡೋಸ್ ಕೋವಿಶೀಲ್ಡ್ ಹಾಗೂ 4ಸಾವಿರ ಕೋವ್ಯಾಕ್ಸಿನ್ ಲಸಿಕೆ ಜಿಲ್ಲೆಗೆ ಹಂಚಿಕೆಯಾಗಿದೆ. ತಡ ರಾತ್ರಿಯೊಳಗೆ ಬಂದು ತಲುಪಲಿದೆ. ಶುಕ್ರವಾರ (ಏ.16) ಬೆಳಿಗ್ಗೆ ವೇಳೆಗೆ ಆಸ್ಪತ್ರೆಗಳಿಗೆ ವಿತರಣೆ ಮಾಡಲಾಗುವುದು' ಎಂದು ಮಾಹಿತಿ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು