ಶುಕ್ರವಾರ, ಮೇ 14, 2021
32 °C

8 ದಿನಗಳಲ್ಲಿ ಒಂದೇ ಕುಟುಂಬದ ಮೂವರು ಕೋವಿಡ್‌ನಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೋವಿಡ್‌–19 ಬಾಧಿತರಾಗಿ ಒಂದೇ ಕುಟುಂಬದ ಮೂವರು 8 ದಿನಗಳ ಅಂತರದಲ್ಲಿ ಸಾವಿಗೀಡಾದ ಘಟನೆ ಇಲ್ಲಿನ ವಿದ್ಯಾನಗರದಲ್ಲಿ ನಡೆದಿದೆ.

ವೃದ್ಧ ದಂಪತಿ ಹಾಗೂ ಮಗ ಸೋಂಕಿಗೆ ಒಳಗಾಗಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

ಮಧುಮೇಹ, ಅಧಿಕ ರಕ್ತದೊತ್ತಡ ಸಮಸ್ಯೆ ಹೊಂದಿದ್ದ 76 ವರ್ಷದ ಮಹಿಳೆ ಕೋವಿಡ್‌ ದೃಢಪಟ್ಟ ಕೆಲವೇ ದಿನಗಳಲ್ಲಿ ಮೃತರಾಗಿದ್ದರು. ಬಳಿಕ 82 ವರ್ಷದ ಪತಿ ನಿಧನರಾದರು. ಕೆಲವೇ ದಿನಗಳ ಹಿಂದೆ ಅವರು ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದರು.

ತಂದೆ ಸಾವಿನ ಬಳಿಕ ಪರೀಕ್ಷೆ ಮಾಡಿಸಿದಾಗ ಪುತ್ರನಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ತಂದೆಯ ರಕ್ಷಾ ವಿಸರ್ಜನೆ ಕಾರ್ಯಕ್ರಮವನ್ನು ಕುಟುಂಬದ ಇತರ ಸದಸ್ಯರು ನೆರವೇರಿಸುತ್ತಿದ್ದ ಸಂದರ್ಭದಲ್ಲೇ ಮತ್ತೊಂದು ಸಾವಿದ ಸುದ್ದಿಯೂ ಬಂದಿದೆ. ತಂದೆಯ ರಕ್ಷಾ ವಿಸರ್ಜನೆಯಾದ ಕೆಲವೇ ಗಂಟೆಗಳಲ್ಲಿ ಮಗನ ಅಂತ್ಯಸಂಸ್ಕಾರ ನೆರವೇರಿದೆ. ಆ ಕುಟುಂಬದ ಮೂವರು (ಪತ್ನಿ ಮತ್ತು ಇಬ್ಬರು ಪುತ್ರಿಯರು) ಈಗ ಅತಂತ್ರರಾಗಿದ್ದಾರೆ. ಕಣ್ಣೀರ ಕಡಲಲ್ಲಿ ಮುಳುಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು