ಬೆಳಗಾವಿ: ಇಲ್ಲಿನ ಎಸ್ಪಿ ಲಕ್ಷ್ಮಣ ನಿಂಬರಗಿ ಅವರಿಗೆ ಶನಿವಾರ ಕೋವಿಡ್–19 ಸೋಂಕು ದೃಢಪಟ್ಟಿದೆ.

ಜಿಲ್ಲಾ ಪೊಲೀಸರು ಹಾಗೂ ಪತ್ರಕರ್ತರ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. ‘ನನ್ನ ಸಂಪರ್ಕಕ್ಕೆ ಬಂದವರೆಲ್ಲ ಕೊರೊನಾ ತಪಾಸಣೆ ಮಾಡಿಸಿಕೊಳ್ಳಬೇಕು’ ಕೋರಿದ್ದಾರೆ. ‘ರ್ಯಾಂಡಮ್ ಟೆಸ್ಟ್ ಮಾಡಿಸಿದ್ದೆ. ಚಿಕಿತ್ಸೆಗಾಗಿ ಕ್ವಾರಂಟೈನ್ ಆಗಿದ್ದೇನೆ. ಹೆಚ್ಚುವರಿ ಎಸ್ಪಿ ಅಮರನಾಥ ರೆಡ್ಡಿ ಕಾರ್ಯಭಾರ ನೋಡಿಕೊಳ್ಳಲಿದ್ದಾರೆ’ ಎಂದು ತಿಳಿಸಿದ್ದಾರೆ.

ಅವರು ಬೆಳಿಗ್ಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.