ಭಾನುವಾರ, ಜೂನ್ 13, 2021
23 °C

ಬೆಳಗಾವಿ: ಸಿಎಂ ಗುಣವಾದ ನಂತರ ಬಂತು ಸಂಪರ್ಕಿತರ ವರದಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆ ಬಂದಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೋವಿಡ್ ಬಾಧಿತರಾಗಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಆದರೆ, ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಇಲ್ಲಿನ ಯುಕೆ27 ಹೋಟೆಲ್‌ನ 12 ಮಂದಿಗೆ ಕೋವಿಡ್ ದೃಢಪಟ್ಟಿರುವ ವರದಿ ಬುಧವಾರ ಬಂದಿದೆ.

ಏ.14 ಮತ್ತು 15ರಂದು ಮುಖ್ಯಮಂತ್ರಿ ಈ ಹೋಟಲ್‌ನಲ್ಲಿದ್ದರು. ಅವರ ಸಂಪರ್ಕಕ್ಕೆ ಬಂದ 40 ಮಂದಿಯ ಗಂಟಲು ಹಾಗೂ ಮೂಗಿನ ದ್ರವದ ಮಾದರಿಯನ್ನು ಏ. 16ರಂದು ಸಂಗ್ರಹಿಸಲಾಗಿತ್ತು. ಅವರ ವರದಿ ಬಹಳ ತಡವಾಗಿ ಬಂದಿದೆ. ಇವರ ಸಂಪರ್ಕಕ್ಕೆ ಬಂದವರಿಗೂ ಸೋಂಕು ಹರಡಿರುವ ಭೀತಿ ಎದುರಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು