ಮಂಗಳವಾರ, ಮಾರ್ಚ್ 9, 2021
31 °C

ಬಾಲಕಿಗೆ ಸೋಂಕು, ಇಬ್ಬರು ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ತಾಲ್ಲೂಕಿನ ಹಿರೇಬಾಗೇವಾಡಿಯ 13 ವರ್ಷದ ಬಾಲಕಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 74ಕ್ಕೆ ಏರಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿರುವ ಪ್ರಕಟಣೆ ಪ್ರಕಾರ, ರೋಗಿ ಸಂಖ್ಯೆ 700 ಆಗಿರುವ ಬಾಲಕಿಯು ರೋಗಿ ಸಂಖ್ಯೆ 364ರ ಸಂಪರ್ಕಕ್ಕೆ ಬಂದವರಾಗಿದ್ದಾರೆ. ಅವರಿಗೆ ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸತತ 4 ದಿನಗಳಿಂದ ಜಿಲ್ಲೆಯಲ್ಲಿ ಹೊಸ ಕೊರೊನಾ ಪಾಸಿಟಿವ್‌ ಪ್ರಕರಣ ವರದಿ ಆಗಿರಲಿಲ್ಲ.

ಈ ನಡುವೆ, ಕೋವಿಡ್-19 ತಗುಲಿದ್ದವರ ಪೈಕಿ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ 36ಕ್ಕೆ ಏರಿದೆ.

‘ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ಹಿರೇಬಾಗೇವಾಡಿಯ ರೋಗಿ ಸಂಖ್ಯೆ 284 ಮತ್ತು ರಾಯಬಾಗ ತಾಲ್ಲೂಕು ಕುಡಚಿಯ ರೋಗಿ ಸಂಖ್ಯೆ 300 ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಆರೋಗ್ಯ ಕಾಪಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಅವರಿಗೆ ಹಲವು ಸಲಹೆಗಳನ್ನು ನೀಡಿ ಕಳುಹಿಸಲಾಗಿದೆ’ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಗುರುವಾರದವರೆಗೆ ಒಟ್ಟು 74 ಜನರಲ್ಲಿ ಸೋಂಕು ಪತ್ತೆಯಾಗಿದೆ. 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಒಬ್ಬರು ಮೃತರಾಗಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ.

‘ಕೊರೊನಾ ಹಿನ್ನೆಲೆಯಲ್ಲಿ ಮೇ 5ರಂದು ನಡೆಸಲಾಗಿದ್ದ ಮಾಧ್ಯಮ ಪ್ರತಿನಿಧಿಗಳ ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿ ಬಂದಿದೆ. ಎಲ್ಲ 37 ಮಂದಿಯ ವರದಿ ನೆಗೆಟಿವ್ ಆಗಿದೆ’ ಎಂದು ಜಿಲ್ಲಾಧಿಕಾರಿ ಡಾ‌.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು