ಶನಿವಾರ, ಜುಲೈ 31, 2021
27 °C

ಮಹಾರಾಷ್ಟ್ರ ಕಡೆಯಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಇದ್ದರಷ್ಟೇ ಪ್ರವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಆ ರಾಜ್ಯಗಳಿಂದ ಬರುವ ವಾಹನಗಳನ್ನು ತಡೆದು‌ ಕೋವಿಡ್ ನೆಗೆಟಿವ್ ಪ್ರಮಾಣಪತ್ರ (ಆರ್‌ಟಿಪಿಸಿಆರ್) ಕೇಳಲಾಗುತ್ತಿದೆ. ಇರುವವರಿಗೆ ಮಾತ್ರವೇ ಪ್ರವೇಶ ನೀಡಲಾಗುತ್ತಿದೆ. ಇಲ್ಲವಾದಲ್ಲಿ ವಾಪಸ್ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಕಾಗವಾಡ ಹಾಗೂ ಕೊಗನೋಳ್ಳಿ ಚೆಕ್‌ಪೋಸ್ಟ್‌ನಲ್ಲಿ ಬುಧವಾರ ನಸುಕಿನಲ್ಲಿ ಕೆಲವು ಖಾಸಗಿ ಬಸ್‌ಗಳನ್ನು ವಾಪಸ್ ಕಳುಹಿಸಲಾಗಿದೆ. ಅವರ ಬಳಿ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಇರಲಿಲ್ಲ. ಅಂತೆಯೇ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿನ ಪ್ರಯಾಣಿಕರಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ಪ್ರಯಾಣಿಕರ ಬಳಿ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಇದೆಯೇ ಎನ್ನುವುದನ್ನು ಪರಿಶೀಲಿಸುವಂತೆ ಚಾಲಕರು ಹಾಗೂ ನಿರ್ವಾಹಕರಿಗೆ ಸೂಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಡಿವೈಎಸ್ಪಿ ಮನೋಜ ಕುಮಾರ ಹಾಗೂ ಸಿಪಿಐ ಸಂಗಮೇಶ ಶಿವಯೋಗಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು