ಗುರುವಾರ , ಡಿಸೆಂಬರ್ 3, 2020
23 °C

ಬೆಳಗಾವಿಯ ಜೈನ ಕಾಲೇಜಿನಲ್ಲಿ ಕೋವಿಡ್ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಜೈನ ಎಂಜಿನಿಯರಿಂಗ್ ಕಾಲೇಜನ್ನು ಕೋವಿಡ್–19 ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪುನರಾರಂಭಿಸಲಾಗಿದೆ.

ಕಾಲೇಜಿನ ಎನ್‌ಎಸ್‌ಎಸ್‌ ಘಟಕ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಯನ್ನು ಮಂಗಳವಾರ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಯಿತು. 150 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಗಂಟಲು ಅಥವಾ ಮೂಗಿನ ದ್ರವ ಸಂಗ್ರಹಿಸಿ ಪರೀಕ್ಷಿಸಲಾಯಿತು. ಕೋವಿಡ್ ನೆಗೆಟಿವ್ ಬಂದ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಬೋಧನಾ ಚಟುವಟಿಕೆ ಆರಂಭಿಸಲಾಯಿತು.

ಪ್ರಾಂಶುಪಾಲ ಹಾಗೂ ನಿರ್ದೇಶಕ ಡಾ.ಕೆ.ಜಿ. ವಿಶ್ವನಾಥ ಮಾತನಾಡಿ, ‘ಆನ್‌ಲೈನ್‌ನಲ್ಲೇ ಪಾಠ ಕೇಳಲು ಬಯಸುವ ವಿದ್ಯಾರ್ಥಿಗಳಿಗೆ ಬೋಧನೆ ಮುಂದುವರಿಸಲಾಗಿದೆ. ಕಾಲೇಜಿಗೆ ಬರುವವರಿಗೂ ಅವಕಾಶವಿದೆ. ಎಲ್ಲರೂ ಮಾಸ್ಕ್‌ ಧರಿಸುವುದು ಹಾಗೂ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಬೋಧಕರು ಫೇಸ್ ಶೀಲ್ಡ್‌ಗಳನ್ನು ಧರಿಸಬೇಕು. ಶೇ 50ರಷ್ಟು ವಿದ್ಯಾರ್ಥಿಗಳು ನಿಗದಿಪಡಿಸಿದ ಸಮಯ ಮತ್ತು ಬ್ಯಾಚ್‌ಗಳಲ್ಲಿ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ’ ಎಂದು ತಿಳಿಸಿದರು.

ಡೀನ್ (ಅಕಾಡೆಮಿಕ್ಸ್) ಪ್ರೊ.ಪ್ರವೀಣ ಚಿಟ್ಟಿ ಹಾಗೂ ಎನ್‌ಎಸ್‌ಎಸ್‌ ಸಂಯೋಜನಾಧಿಕಾರಿ ಪ್ರೊ.ವಿನಾಯಕ ನಾನ್ನೋಜಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು