ಶನಿವಾರ, ಅಕ್ಟೋಬರ್ 23, 2021
22 °C
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 4,09,977 ಲಸಿಕೆ ನೀಡುವ ಮೂಲಕ ಪ್ರಥಮ ಸ್ಥಾನ ಗಳಿಸಿದೆ.

ಸೆ.17 ಮೆಗಾ ಲಸಿಕಾ ಮೇಳ: ದೇಶದಲ್ಲಿ ಬೆಳಗಾವಿಗೆ 2ನೇ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಸೆ.17ರಂದು ನಡೆದ ಮೆಗಾ‌ ಲಸಿಕಾ ಮೇಳದಲ್ಲಿ ಜಿಲ್ಲೆಯು ದೇಶದಲ್ಲೇ 2ನೇ ಸ್ಥಾನ ಗಳಿಸಿ ಸಾಧನೆ ಮಾಡಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 4,09,977 ಲಸಿಕೆ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದಿದೆ. ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 2,57,604 ಲಸಿಕೆ ನೀಡುವ ಮೂಲಕ ದ್ವಿತೀಯ ಸ್ಥಾನ ಗಳಿಸಿದ್ದೇವೆ. ಇಲ್ಲಿ 3 ಲಕ್ಷ ಡೋಸ್‌ ನೀಡುವ ಗುರಿ ಹೊಂದಿತ್ತು. ನಿರೀಕ್ಷಿತ ಗುರಿ ಸಾಧನೆ ಆಗದಿದ್ದರೂ ಅತಿ ಹೆಚ್ಚು ಲಸಿಕೆ ನೀಡುವುದರಲ್ಲಿ ದ್ವಿತೀಯ ಸ್ಥಾನ‌ ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ’ ಎಂದು ಹೇಳಿದ್ದಾರೆ.

‘ಈ ಸಾಧನೆಗೆ ಶ್ರಮಿಸಿದ ಕಂದಾಯ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಇಲಾಖೆಯವರು, ನಗರ ಸ್ಥಳೀಯ ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಭಿನಂದನೆ ಸಲ್ಲಬೇಕು. ಮೇಳದ ಯಶಸ್ಸಿಗೆ ಸಹಕರಿಸಿದ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಧನ್ಯವಾದ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು